ಭಾನುವಾರ, ಜೂನ್ 20, 2021
23 °C

ಕೋಲಾರ: ಜಿಲ್ಲೆಗೆ ‘ಬ್ಲ್ಯಾಕ್‌ ಫಂಗಸ್‌’ ದಾಂಗುಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಣ್ಣಿನ ಸೋಂಕು–ಪ್ರಾತಿನಿಧಿಕ ಚಿತ್ರ

ಕೋಲಾರ: ಕೋವಿಡ್‌ ಮಹಾಮಾರಿಯಿಂದ ತತ್ತರಿಸಿರುವ ಜಿಲ್ಲೆಗೆ ಶಿಲೀಂಧ್ರ (ಬ್ಲ್ಯಾಕ್ ಫಂಗಸ್‌) ಸೋಂಕು ದಾಂಗುಡಿ ಇಟ್ಟಿದ್ದು, 12 ಮಂದಿಯಲ್ಲಿ ಈ ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದ 12 ಮಂದಿಯಲ್ಲಿ ಮೂರು ವಾರದ ಬಳಿಕ ಬ್ಲ್ಯಾಕ್‌ ಫಂಗಸ್‌ ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವುದನ್ನು ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ.

ಸೋಂಕಿತ 12 ಮಂದಿಯಲ್ಲಿ 7 ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ 5 ಮಂದಿ ಸೋಂಕಿತರು ಚಿಕಿತ್ಸೆಗೆ ಹಣ ಹೊಂದಿಸಿಕೊಂಡು ಬರುವುದಾಗಿ ಹೇಳಿ ಆಸ್ಪತ್ರೆಯಿಂದ ಹೊರಟು ಹೋಗಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರುವ 7 ಸೋಂಕಿತರ ಪೈಕಿ 4 ಮಂದಿಗೆ ಶಸ್ತ್ರಚಿಕಿತ್ಸೆ ನಡೆಸಿ, ಸೋಂಕಿನಿಂದ ಹಾನಿಗೊಳಗಾಗಿರುವ ದೇಹದ ಭಾಗವನ್ನು ತೆರವುಗೊಳಿಸಲಾಗಿದೆ.

‘45 ವರ್ಷದಿಂದ 75 ವರ್ಷದವರೆಗಿನ ವಯೋಮಾನದವರಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕಿನ ಲಕ್ಷಣ ಗೋಚರಿಸಿದೆ. ಈ ಸೋಂಕಿತರಿಗೆ ಲಿಪೋಸೋಮಲ್‌ ಆಂಫೊಟೆರಿಸಿನ್‌ ಬಿ ಚುಚ್ಚುಮದ್ದು ನೀಡಿ ಚಿಕಿತ್ಸೆ ಮುಂದುವರಿಸಲಾಗಿದೆ’ ಎಂದು ಜಾಲಪ್ಪ ಆಸ್ಪತ್ರೆ ವೈದ್ಯಕೀಯ ಸೂಪರಿಂಟೆಂಡೆಂಟ್‌ ಡಾ.ಎಸ್‌.ಎಂ.ಅಜೀಂ ಮೋಹಿಯುದ್ದೀನ್ ‘ಪ್ರಜಾವಾಣಿ’ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು