ಶನಿವಾರ, ಜೂನ್ 6, 2020
27 °C

ಬಿಜೆಪಿ ಜನಪ್ರತಿನಿಧಿಗಳಿಂದ ತಿಂಗಳ ವಸೂಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಗಾಳಿಯಲ್ಲಿ ಗೆದ್ದು ಬಂದ ಜನಪ್ರತಿನಿಧಿಗಳು ಬ್ಲಾಕ್‌ಮೇಲ್‌ ತಂತ್ರದ ಮೂಲಕ ಜಿಲ್ಲೆಯಲ್ಲಿ ಅಧಿಕಾರ ನಡೆಸುತ್ತಿದ್ದಾರೆ’ ಎಂದು ಶಾಸಕ ಕೆ.ವೈ.ನಂಜೇಗೌಡ ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹಾಗೂ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಆ ಜನಪ್ರತಿನಿಧಿಗಳಿಂದ ತಿಂಗಳ ವಸೂಲಿ ನಡೆಯುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಬಿಜೆಪಿ ಸಚಿವರು ಮತ್ತು ಸಂಸದರು ಅಧಿಕಾರಿಗಳಿಗೆ ಪರ್ಸೆಟೆಂಜ್‌ ನಿಗದಿಪಡಿಸಿ ಬೆದರಿಕೆ ಹಾಕುತ್ತಿದ್ದಾರೆ. ಇಂತಹ ಅನಿವಾರ್ಯ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಗಾಳಿಯಲ್ಲಿ ಗೆದ್ದು ಬಂದ ಜನಪ್ರತಿನಿಧಿಗಳಿಗೆ ಶರಣಾಗಿದ್ದಾರೆ’ ಎಂದು ಟೀಕಿಸಿದರು.

‘ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಂಗ್ರೆಸ್ ಶಾಸಕರನ್ನು ಸಚಿವರು ಹಾಗೂ ಸಂಸದರು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಾಖಲೆಪತ್ರ ಸಮೇತ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು