ಶನಿವಾರ, ಸೆಪ್ಟೆಂಬರ್ 25, 2021
24 °C

ಮುಳಬಾಗಿಲು: ಕುರುಡುಮಲೆ ಪ್ರವೇಶ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಳಬಾಗಿಲು: ತಾಲ್ಲೂಕಿನ ಕುರುಡುಮಲೆ ಗ್ರಾಮದ ಪುರಾಣ ಪ್ರಸಿದ್ಧ ವಿನಾಯಕ ದೇವಾಲಯಕ್ಕೆ ಗುರುವಾರದಿಂದ ಸೆ. 12ರವರೆವಿಗೂ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಗಣೇಶ ಚತುರ್ಥಿಯು ಶುಕ್ರವಾರ ಇದೆ. ಒಂದು ದಿನ ಮುಂಚಿತವಾಗಿಯೇ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶನಿವಾರ ನಡೆಯಬೇಕಿದ್ದ ಲಕ್ಷ್ಮೀಗಣಪತಿ ದೇವರ ಬ್ರಹ್ಮ ರಥೋತ್ಸವವನ್ನು ರದ್ದುಪಡಿಸಲಾಗಿದೆ. ಜಿಲ್ಲಾಧಿಕಾರಿ ಅವರು ಸೂಚನೆ ಮೇರೆಗೆ ತಹಶೀಲ್ದಾರ್ ಕೆ.ಎನ್. ರಾಜಶೇಖರ್ ಆದೇಶ ಹೊರಡಿಸಿದ್ದಾರೆ.

ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಗೆ ಮಾತ್ರ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.