ಶ್ರೀನಿವಾಸಪುರ: ಬಿಎಸ್ಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಗ್ರಾಮ ಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಬೇಕು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು.

ಬಿಎಸ್ಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಹಂತದ ಚುನಾವಣೆಗಳಲ್ಲಿ ಸ್ಪರ್ಧಿಸಿ ಗೆಲ್ಲುವುದು ಹಾಗೂ ರಾಜ್ಯದಲ್ಲಿ ಅಧಿಕಾರ ಸ್ಥಾನಕ್ಕೆ ಏರುವುದು ಪಕ್ಷದ ಉದ್ದೇಶವಾಗಿದೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಸ್ವಾತಂತ್ರ್ಯ ಬಂದಾಗಿನಿಂದ ಅಧಿಕಾರ ನಡೆಸಿದ ಬೇರೆ ಬೇರೆ ಪಕ್ಷಗಳು ಬಡತನ ನಿವಾರಣೆ ಮಾಡುವಲ್ಲಿ ವಿಫಲವಾಗಿವೆ. ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗಿಲ್ಲ. ಇಂಥ ಸಂದರ್ಭದಲ್ಲಿ ಮತದಾರರ ಒಲವು ಗಳಿಸಿದರೆ ಸಮಾಜದ ಎಲ್ಲ ವರ್ಗದ ಜನರಿಗೂ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜ.15 ರಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ಜನ್ಮದಿನಾಚರಣೆ ಆಚರಿಸಲಾಗುವುದು. ಅದಕ್ಕೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬೇಕಾದ ಆರ್ಥಿಕ ಸಂಪನ್ಮೂಲ ಸಂಗ್ರಹಿಸಬೇಕು ಎಂದು ಹೇಳಿದರು.

ಬಿಎಸ್ಪಿ ರಾಜ್ಯ ಘಟಕದ ಉಸ್ತುವಾರಿ ಮಾಯಸಂದ್ರ ಮುನಿಯಪ್ಪ, ಪಕ್ಷದ ಸಂಘಟನೆ ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತನಾಡಿದರು.

ಮುಖಂಡ ನಾಗಪ್ಪ, ಅಶೋಕ ಚಕ್ರವರ್ತಿ, ಎಂ.ಜಿ.ಜಯಪ್ರಕಾಶ್, ಎಚ್.ಸಿ.ರಾಜು, ಮಂಜಲನಗರ ಚಂದ್ರಪ್ಪ, ಚಂಗಲರಾಯ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.