ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ತೋಟಗಾರಿಕೆ ಮಿಷನ್: ಸಹಾಯ ಧನಕ್ಕೆ ಅರ್ಜಿ ಆಹ್ವಾನ

Last Updated 26 ಜುಲೈ 2021, 4:35 IST
ಅಕ್ಷರ ಗಾತ್ರ

ಕೋಲಾರ: ತೋಟಗಾರಿಕೆ ಇಲಾಖೆಯು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಸಹಾಯ ಧನಕ್ಕೆ ಅರ್ಜಿ ಆಹ್ವಾನಿಸಿದೆ.

ಮಾವು, ದಾಳಿಂಬೆ, ಬಾಳೆ, ಡ್ರ್ಯಾಗನ್‌ ಫ್ರೂಟ್‌, ಹಲಸು, ಹೂವು, ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ಮಲ್ಚಿಂಗ್, ಮಾವು ಪುನಶ್ಚೇತನ, ಸಮುದಾಯ ಕೃಷಿ ಹೊಂಡ, ವೈಯಕ್ತಿಕ ಕೃಷಿ ಹೊಂಡ, ಸಮಗ್ರ ಪೀಡೆ ನಿರ್ವಹಣೆ, ಪ್ಯಾಕ್‌ಹೌಸ್ ಯಾಂತ್ರೀಕರಣ, ಹಸಿರು ಮನೆ ಹಾಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆ ಬೇಸಾಯಕ್ಕೆ ಸಹಾಯಧನ ನೀಡಲಾಗುತ್ತದೆ ಎಂದು ಇಲಾಖೆಯ ಬಂಗಾರಪೇಟೆ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ

ಆಸಕ್ತ ರೈತರು ಪೂರಕ ದಾಖಲೆ ಪತ್ರಗಳೊಂದಿಗೆ ಜುಲೈ 31ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ 74115 48526 ಅಥವಾ 98457 98671 ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ವೈಯಕ್ತಿಕ ಸೌಲಭ್ಯಕ್ಕೆ ಅರ್ಜಿ
ಎಸ್‌ಎಫ್‌ಸಿ ಮುಕ್ತ ನಿಧಿಯ ಶೇ 24.10ರ ಕಾರ್ಯಕ್ರಮ ದಡಿ ಲಭ್ಯವಿರುವ ವೈಯಕ್ತಿಕ ಸೌಲಭ್ಯಗಳ ವಿವರವನ್ನು ಕಚೇರಿಯ ಸೂಚನಾ ಫಲಕದಲ್ಲಿ ಹಾಕಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಬಂಗಾರಪೇಟೆ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುರಸಭೆ ವ್ಯಾಪ್ತಿಯಲ್ಲಿ ವಾಸವಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಜನರು ಕಚೇರಿಯ ಬಡತನ ನಿರ್ಮೂಲನಾ ಶಾಖೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ದಾಖಲೆ ಪತ್ರಗಳ ಜತೆ ಆ. 18ರೊಳಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಉದ್ಯೋಗ ಖಾತ್ರಿಯಡಿ ಸೌಲಭ್ಯ
ತೋಟಗಾರಿಕೆ ಇಲಾಖೆಯು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬಹುವಾರ್ಷಿಕ ಬೆಳೆಗಾಳದ ತೆಂಗು, ಗೋಡಂಬಿ, ಹುಣಸೆ, ಮಾವು, ಸೀಬೆ, ನೇರಳೆ, ಪಪ್ಪಾಯ, ಇತರೆ ಹಣ್ಣಿನ ಬೆಳೆಗಳು, ಗುಲಾಬಿ ಹೊಸ ಪ್ರದೇಶ ವಿಸ್ತರಣೆ ಹಾಗೂ ಮಾವು, ಸೀಬೆ, ತೆಂಗು, ಸಪೋಟ ಪುನಶ್ಚೇತನ, ಟ್ರೆಂಚ್‌ಕಮ್‌ ಬಂಡ್‌ ನಿರ್ಮಿಸಿಕೊಳ್ಳಬಹುದು. ಆಸಕ್ತ ರೈತರು ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕಾಲೇಜು ಆರಂಭಕ್ಕೆ ಅರ್ಜಿ ಆಹ್ವಾನ
2021–22ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜು ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಪದವಿ ಪೂರ್ವ ಶಿಕ್ಷಣ ನಿಯಮಾವಳಿ–2006ರ ನಿಯಮ 4ರ ಅನ್ವಯ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜು ಆರಂಭಿಸಲು ಇಚ್ಛಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಟ್ರಸ್ಟ್‌ಗಳು ಜುಲೈ 26ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹಿಂದೆ 2019–20 ಹಾಗೂ 2020–21ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್‌ ನೋಡಬಹುದು ಎಂದು ಇಲಾಖೆ ಉಪ ನಿರ್ದೇಶಕ ರಾಮಚಂದ್ರಪ್ಪ ತಿಳಿಸಿದ್ದಾರೆ.

ಶುಲ್ಕ ಪಾವತಿಗೆ ಸೂಚನೆ
ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ನಡೆಸಲಿರುವ ಪರೀಕ್ಷೆಗೆ ಪರೀಕ್ಷಾ ಶುಲ್ಕ ಪಾವತಿಸಲು ಅಧಿಸೂಚನೆ ಹೊರಡಿಸಿದೆ.

ಪರೀಕ್ಷಾ ಶುಲ್ಕ ಪಾವತಿಸಲು ಆ. 6 ಕಡೆಯ ದಿನ. ₹ 200 ದಂಡದೊಂದಿಗೆ ಆ.21ರೊಳಗೆ ಶುಲ್ಕ ಪಾವತಿಸಬಹುದು.

ವಿದ್ಯಾರ್ಥಿಗಳು ಕಡ್ಡಾಯವಾಗಿ ಅಂತರ್ಜಾಲದ ಮೂಲಕವೇ ಶುಲ್ಕ ಪಾವತಿಸಬೇಕು. 

ಹೆಚ್ಚಿನ ಮಾಹಿತಿಗೆ ವಿ.ವಿಯ ವೆಬ್‌ಸೈಟ್‌ ನೋಡಬಹುದು. 

ಅರ್ಜಿ ಸಲ್ಲಿಸುವಾಗ ಸಮಸ್ಯೆ ಎದುರಾದರೆ ಸಹಾಯವಾಣಿ ಸಂಖ್ಯೆ 8800335638 ಸಂಪರ್ಕಿಸಬ ಹುದು ಎಂದು ವಿ.ವಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಅವಕಾಶ
ಯೂತ್‌ ಫಾರ್‌ ಜಾಬ್ಸ್ ಪ್ರತಿಷ್ಠಾನವು ಅಂಗವಿಕಲರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಅವಕಾಶ ಕಲ್ಪಿಸಲಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ತಿಳಿಸಿದ್ದಾರೆ.

ಪ್ರತಿಷ್ಠಾನವು ಕೋಲಾರ ಮತ್ತು ಬೆಂಗಳೂರಿನಲ್ಲಿ ಉದ್ಯೋಗಾವಕಾಶ ಕಲ್ಪಿಸಲಿದೆ. ದೈಹಿಕ ಮತ್ತು ಶ್ರವಣದೋಷವುಳ್ಳ ಅಂಗವಿಕಲ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ 93474 12600, 95531 65208 ಅಥವಾ 93474 12601 ಮೊಬೈಲ್‌ ಸಂಖ್ಯೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT