ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬಜೆಟ್‌: ಸಂಸದ

Published 16 ಫೆಬ್ರುವರಿ 2024, 15:23 IST
Last Updated 16 ಫೆಬ್ರುವರಿ 2024, 15:23 IST
ಅಕ್ಷರ ಗಾತ್ರ

ಕೋಲಾರ: ‘ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿಂದಲೂ ಜನತೆಗೆ ಆಘಾತಗಳ ಮೇಲೆ ಆಘಾತ ನೀಡುತ್ತಲೇ ಬಂದಿದೆ. ಈ ಬಾರಿ ಮಂಡಿಸಿರುವ ಬಜೆಟ್ ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವಂಥದ್ದಾಗಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದ ಒಟ್ಟಾರೆ ಅಭಿವೃದ್ಧಿ ವಿಚಾರದಲ್ಲಿ ಹಣ ನೀಡದೆ ಅಲ್ಪಸಂಖ್ಯಾತರು, ಕ್ರೈಸ್ತ ಸಮುದಾಯಕ್ಕೆ ಹಾಗೂ ಗ್ಯಾರಂಟಿಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಿದ್ದಾರೆ. ಮುಜರಾಯಿ ಇಲಾಖೆಯನ್ನು ಪ್ರಾಧಿಕಾರವನ್ನಾಗಿಸಿ ಹುಂಡಿ ಹಣವನ್ನು ಅವರ ಪಕ್ಷದ ಮುಖಂಡರ ಐಷಾರಾಮಿ ಜೀವನಕ್ಕೆ ಕಾರು ಸೇರಿದಂತೆ ಮತ್ತಿತರ ಸೌಲಭ್ಯ ಕಲ್ಪಿಸಲು ದೇವಸ್ಥಾನ ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.

‘ರೈತರಿಗೆ ₹ 2 ಸಾವಿರ ಬರ ಪರಿಹಾರ ಕೊಡಲು ಸಾಧ್ಯವಿಲ್ಲದ ಸಂದರ್ಭದಲ್ಲಿ ಮಸೀದಿಗಳು, ಚರ್ಚ್‍ಗಳು, ವಕ್ಫ್ ಬೋರ್ಡ್‍ಗೆ ಹಣ ನೀಡುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕೆಂದು ಜಾತಿಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

‘ಕರ್ನಾಟಕದ ಒಟ್ಟಾರೆ ಅಭಿವೃದ್ಧಿಯು ಪ್ರಧಾನಿ ನರೇಂದ್ರ ಮೋದಿ, ಹಿಂದೆ ಮುಖ್ಯಮಂತ್ರಿ ಆಗಿದ್ದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೀಡಿರುವ ಅನುದಾನದಿಂದ ನಡೆಯುತ್ತಿದೆ. ಶಾಸಕರಿಗೆ ₹ 2 ಕೋಟಿ ಅನುದಾನ ನೀಡಲೂ ರಾಜ್ಯ ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT