ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು ನೈತಿಕ ಮೌಲ್ಯ ಬೆಳೆಸಿಕೊಳ್ಳಿ

ಪದವಿ ಪ್ರದಾನ ಸಮಾರಂಭದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಸಲಹೆ
Last Updated 17 ಆಗಸ್ಟ್ 2019, 13:56 IST
ಅಕ್ಷರ ಗಾತ್ರ

ಕೋಲಾರ: ‘ವಿದ್ಯಾರ್ಥಿಗಳು ಶಿಕ್ಷಣದ ಜತೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು, ಗುರು, ಹಿರಿಯರ ಕುರಿತು ಗೌರವ ಭಾವನೆ ಹೊಂದಿರಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.

ನಗರ ಹೊರವಲಯದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಕಾಲೇಜಿನ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೇ ತಪ್ಪು ದಾರಿಗೆ ಹೋಗುತ್ತಿದ್ದಾರೆ. ಇದಕ್ಕೆ ಶಿಕ್ಷಣ ಪದ್ದತಿಯಲ್ಲಿ ಎಲ್ಲೋ ಲೋಪವಿವೇ ಕಾರಣ ಎನಿಸುತ್ತಿದೆ’ ಎಂದರು.

‘ಶಿಕ್ಷಣ ವ್ಯವಸ್ಥೆ ಆಧುನೀಕರಣಗೊಂಡಿದೆ, ಮೊಬೈಲ್, ಕಂಪ್ಯೂಟರ್ ಬಂದಿದೆ, ಆದರೆ ಹಿಂದೆ ಇದ್ದಂತೆ ವಿದ್ಯಾರ್ಥಿಗಳಲ್ಲಿ ಉತ್ತಮ ಗುಣಗಳು ಮರೆಯಾಗುತ್ತಿವೆ. ಹಿಂದಿನ ಶಿಕ್ಷಣ ಪದ್ದತಿಗೂ, ಈಗಿನ ಶಿಕ್ಷಣ ಪದ್ದತಿಗೂ ವ್ಯಾತ್ಯಾಸವಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜು, ‘ಕೇವಲ ಅಂಕಗಳಿಕೆಗೆ ಮಾತ್ರ ಶಿಕ್ಷಣ ಸೀಮಿತವಾಬಾರದು, ಬದುಕಿನಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಹೇಳಿದರು.

‘ಪ್ರಸ್ತುತ ಸಂದರ್ಭಕ್ಕೆ ಮೌಲ್ಯಯುತ ಶಿಕ್ಷಣ ಅಗತ್ಯವಿದೆ. ದೇಶದ ಆರ್ಥಿಕತೆ ಜ್ಞಾನದಿಂದ ಕೂಡಿದೆ. ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಮುನ್ನಡೆಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ 5ನೇ ಸೆಮಿಷ್ಟರ್ ಪದವಿ ಪರೀಕ್ಷೆಯಲ್ಲಿ ಬಿ.ಎಸ್‍ಸಿ ವಿಭಾಗದಲ್ಲಿ ಶೇ.98, ಬಿ.ಕಾಂ ವಿಭಾಗದಲ್ಲಿ ಶೇ.98, ಬಿಸಿಎ ವಿಭಾಗದಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದ್ದು, ನೂರಕ್ಕೆ ನೂರು ಅಂಕ ಪಡೆದುಕೊಂಡಿರುವ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಉದಯಕುಮಾರ್, ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಕೆ.ನಟರಾಜ್, ಸಹ್ಯಾದ್ರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT