ಬುಧವಾರ, ಜನವರಿ 20, 2021
21 °C

ಬೆಂಬಲ ಬೆಲೆಗೆ ಭತ್ತ ಖರೀದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಸರ್ಕಾರ ಆದೇಶಿಸಿದ್ದು, ಜಿಲ್ಲೆಗೆ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನಿಯೋಜಿಸಲಾಗಿದೆ.

ರೈತರಿಂದ ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ ₹ 1,868 ಹಾಗೂ ಗ್ರೇಡ್-ಎ ಭತ್ತಕ್ಕೆ ₹ 1,888 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 16 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್ ಭತ್ತ ಖರೀದಿಸಲಾಗುವುದು ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ರೈತರು ನೋಂದಣಿ ಕೇಂದ್ರಗಳಲ್ಲಿ ಡಿ.30ರೊಳಗೆ ಹೆಸರು ನೋಂದಣಿ ಮಾಡಿಸಬೇಕು. ಕೋಲಾರ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ನಂತರ ಭತ್ತ ತಲುಪಿಸಬೇಕಾದ ಅಕ್ಕಿ ಗಿರಣಿಗಳ ವಿವರವನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುತ್ತದೆ. ಬಳಿಕ ರೈತರು ತಮ್ಮ ಭತ್ತವನ್ನು ಗ್ರೇಡರ್‌ಗಳಿಂದ ಪರೀಕ್ಷಿಸಿ, ಗುಣಮಟ್ಟದ ಪ್ರಮಾಣಪತ್ರ ಪಡೆದು ಅಕ್ಕಿ ಗಿರಣಿಗಳಿಗೆ ಸರಬರಾಜು ಮಾಡಬೇಕು. ರೈತರ ಬ್ಯಾಂಕ್‌ ಖಾತೆಗೆ ಆನ್‌ಲೈನ್‌ ಮೂಲಕ ಹಣ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.