ಬುಧವಾರ, ಜನವರಿ 20, 2021
22 °C

ಸಂಕ್ರಾಂತಿ ಬಳಿಕ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಸಂಕ್ರಾಂತಿ ಹಬ್ಬದ ನಂತರ ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಬಹುದು’ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ನಾವು ತ್ಯಾಗ ಮಾಡಿದ್ದರಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನಂಬಿಕೆಯಿದೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ’ ಎಂದರು.

‘ಮುಖ್ಯಮಂತ್ರಿಗಳು ವಿಧಾನ ಪರಿಷತ್‌ ಸದಸ್ಯರಾದ ಆರ್‌.ಶಂಕರ್, ಎಂಟಿಬಿ ನಾಗರಾಜ್‌ ಮತ್ತು ಶಾಸಕ ಮುನಿರತ್ನ ಅವರನ್ನು ಮಂತ್ರಿ ಮಾಡೇ ಮಾಡುತ್ತಾರೆ. ಇದು ನೂರಕ್ಕೆ ನೂರು ಸತ್ಯ. ಎಚ್‌.ವಿಶ್ವನಾಥ್‌ ಅವರ ವಿಚಾರ ನನಗೆ ಗೊತ್ತಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.