ಸೋಮವಾರ, ಸೆಪ್ಟೆಂಬರ್ 20, 2021
21 °C

ಕೋಲಾರ: ನಿರ್ಗಮಿತ ತಹಶೀಲ್ದಾರ್‌ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪೋಷಕರ ಷಷ್ಠಿಪೂರ್ತಿ ಕಾರ್ಯಕ್ರಮ ನಡೆಸಿದ ಆರೋಪದ ಮೇಲೆ ನಿರ್ಗಮಿತ ತಹಶೀಲ್ದಾರ್‌ ಶೋಭಿತಾ ಅವರ ವಿರುದ್ಧ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.

ಶೋಭಿತಾ ಅವರು ಜಿಲ್ಲಾ ಕೇಂದ್ರದ ಕಲ್ಯಾಣ ಮಂಟಪವೊಂದರಲ್ಲಿ ಆ.6ರಂದು ತಮ್ಮ ತಂದೆ ತಾಯಿಯ ಷಷ್ಠಿಪೂರ್ತಿ ಸಮಾರಂಭ ನಡೆಸಿದ್ದರು. ಇಡೀ ದಿನ ನಡೆದ ಕಾರ್ಯಕ್ರಮದಲ್ಲಿ ಶೋಭಿತಾ ಅವರ ಸಂಬಂಧಿಕರು, ಸ್ನೇಹಿತರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

ಷಷ್ಠಿಪೂರ್ತಿ ಜತೆಗೆ ಪೂಜೆ, ಆರತಕ್ಷತೆ ಸಹ ನಡೆಸಲಾಗಿತ್ತು. ಕಲ್ಯಾಣ ಮಂಟಪದಲ್ಲಿ ಕಿಕ್ಕಿರಿದು ಸೇರಿದ್ದ ಸಾವಿರಾರು ಮಂದಿ ಅಂತರ ಕಾಯ್ದುಕೊಳ್ಳದೆ ಮತ್ತು ಮಾಸ್ಕ್‌ ಧರಿಸದೆ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ್ದರು. ಹಿತೈಷಿಗಳು, ಸ್ನೇಹಿತರು ಹಾಗೂ ಸಂಬಂಧಿಕರು ಕೋವಿಡ್‌ ಆತಂಕ ಮರೆತು ಶೋಭಿತಾ ಪೋಷಕರಿಗೆ ಹಸ್ತಲಾಘವ ನೀಡಿ ಶುಭ ಕೋರಿದ್ದರು.

ಶೋಭಿತಾ ಅವರು ಕೋವಿಡ್‌ ಆತಂಕದ ನಡುವೆಯೂ ಸರ್ಕಾರದ ಆದೇಶ ಧಿಕ್ಕರಿಸಿ ಪೋಷಕರ ಷಷ್ಠಿಪೂರ್ತಿ ಕಾರ್ಯಕ್ರಮ ನಡೆಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಮತ್ತು ಕಾರ್ಯಕ್ರಮಕ್ಕೆ ಪೂರ್ವಾನುಮತಿ ಪಡೆಯದ ಆರೋಪದ ಮೇಲೆ ಶೋಭಿತಾ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಅವರು ಪೊಲೀಸರಿಗೆ ದೂರು ಕೊಟ್ಟಿದ್ದರು.

ಈ ದೂರು ಆಧರಿಸಿ ಪೊಲೀಸರು ಶೋಭಿತಾ ಮತ್ತು ಅವರ ಪೋಷಕರ ವಿರುದ್ಧ ನಿರ್ಲಕ್ಷ್ಯ ಆರೋಪ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ–2005ರಡಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು