ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಆರೋಪ; ವರ್ತೂರು ಪ್ರಕಾಶ್ ವಿರುದ್ಧ ಪ್ರಕರಣ

ಜಿ.ಪಂ–ತಾ.ಪಂ ಚುನಾವಣೆ
Last Updated 3 ಆಗಸ್ಟ್ 2021, 13:19 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣಾ ಸಿದ್ಧತೆ ಸಂಬಂಧ ಸಭೆ ನಡೆಸಿ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಸಚಿವ ವರ್ತೂರು ಪ್ರಕಾಶ್‌ ಸೇರಿದಂತೆ 105 ಮಂದಿ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರ್ತೂರು ಪ್ರಕಾಶ್‌ ಹಾಗೂ ಬೆಂಬಲಿಗರು ಪೂರ್ವಾನುಮತಿ ಪಡೆಯದೆ ನಗರದ ಎ.ಎಫ್‌ ಸಭಾಂಗಣದಲ್ಲಿ ಸೋಮವಾರ (ಆ.2) ನೂರಾರು ಕಾರ್ಯಕರ್ತರನ್ನು ಒಂದೆಡೆ ಸೇರಿಸಿ ಚುನಾವಣೆ ಸಂಬಂಧ ಸಭೆ ನಡೆಸಿದ್ದರು. ಸಭಾಂಗಣದಲ್ಲಿ ಕಿಕ್ಕಿರಿದು ಸೇರಿದ್ದ ಕಾರ್ಯಕರ್ತರು ಅಂತರ ಕಾಯ್ದುಕೊಳ್ಳದೆ ಹಾಗೂ ಮಾಸ್ಕ್‌ ಧರಿಸದೆ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ್ದರು.

ಈ ಸಂಬಂಧ ಕೋಲಾರ ಕಸಬಾ ಕಂದಾಯ ನಿರೀಕ್ಷಕ ವಿಜಯ್‌ದೇವ್‌ ಸ್ಥಳ ಪರಿಶೀಲನೆ ಮಾಡಿ ಪೊಲೀಸರಿಗೆ ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಪೊಲೀಸರು ವರ್ತೂರು ಪ್ರಕಾಶ್‌, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌, ಕೋಲಾರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಆಂಜಿನಪ್ಪ, ದರಖಾಸ್ತು ಸಮಿತಿ ಮಾಜಿ ಅಧ್ಯಕ್ಷ ಬೆಗ್ಲಿ ಸೂರ್ಯಪ್ರಕಾಶ್‌, ಎ.ಎಫ್‌ ಸಭಾಂಗಣದ ಮಾಲೀಕರು ಹಾಗೂ 100 ಮಂದಿ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT