ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸಪುರ: ಪ್ರಗತಿ ಪರಿಶೀಲಿಸಿದ ಕೇಂದ್ರ ತಂಡ

Last Updated 5 ನವೆಂಬರ್ 2020, 3:32 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಕೇಂದ್ರ ಅಧ್ಯಯನ ತಂಡ ಬುಧವಾರ ತಾಲ್ಲೂಕಿನ ಲಕ್ಷ್ಮೀಸಾಗರ ಹಾಗೂ ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿತು.

ದೆಹಲಿಯಿಂದ ಆಗಮಿಸಿದ್ದ ಅಧ್ಯಯನ ತಂಡದ ನೇತೃತ್ವವನ್ನು ಮಹಾರಾಷ್ಟ್ರದ ಗಾಯಕ್‌ವಾಡ್‌ ವಹಿಸಿದ್ದರು. ವಿನಾಯಕ ಘಾಡೆ ತಂಡದ ಉಪ ಮುಖ್ಯಸ್ಥರಾಗಿದ್ದರು.
ತಂಡದ ಸದಸ್ಯರು ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ ಕೃಷಿ, ಸ್ವಚ್ಛ ಭಾರತ್‌ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ
ಗಳ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ನಿರ್ವಹಣೆ ಕುರಿತು ತೃಪ್ತಿ ವ್ಯಕ್ತಪಡಿಸಿದರು.

ಕಾಮಗಾರಿಗಳ ಪರಿಶೀಲನೆ ಸಂದರ್ಭದಲ್ಲಿ ಸ್ಥಳೀಯ ರೈತರು ಹಾಗೂ ಫಲಾನುಭವಿಗಳನ್ನು ಭೇಟಿಯಾಗಿ, ಯೋಜನೆಗಳ ಪ್ರಯೋಜನ ಕುರಿತು ಮಾತನಾಡಿದರು. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಿಗುತ್ತಿವೆಯೇ ಇಲ್ಲವೇ ಎಂಬುದರ ಬಗ್ಗೆ ಕೇಳಿ ತಿಳಿದುಕೊಂಡರು.

ತಂಡ ಜಿಲ್ಲೆಯಲ್ಲಿ 10 ದಿನಗಳ ಕಾಲ ಪ್ರವಾಸ ಮಾಡಲಿದ್ದು, 40ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್‌.ರವಿಕುಮಾರ್‌ ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್‌ ಸಂಯೋಜಕ ವಿಜಯ ಕುಮಾರ್‌, ರಾಷ್ಟ್ರೀಯ ಗ್ರಾಮೀಣ ನೈರ್ಮಲ್ಯ ಯೋಜನಾಧಿಕಾರಿ ಸುಂದರೇಶ್‌, ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಕಾರ್ಯ
ನಿರ್ವಹಣಾಧಿಕಾರಿ ಎಸ್‌.ಆನಂದ್, ಸಹಾಯಕ ನಿರ್ದೇಶಕ ಕೆ.ರಾಮಪ್ಪ, ಸುರೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT