ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: 400 ವಿದ್ಯಾರ್ಥಿಗಳು ಗೈರು

Last Updated 31 ಜುಲೈ 2020, 12:59 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ 17 ಕೇಂದ್ರಗಳಲ್ಲಿ ಶುಕ್ರವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಭೌತಶಾಸ್ತ್ರ ವಿಷಯಕ್ಕೆ 400 ಮಂದಿ ಹಾಗೂ ರಸಾಯನಶಾಸ್ತ್ರ ವಿಷಯಕ್ಕೆ 400 ವಿದ್ಯಾರ್ಥಿಗಳು ಗೈರಾದರು.

ಪರೀಕ್ಷೆಯ 2ನೇ ದಿನವೂ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲಾಯಿತು. ಮಾಸ್ಕ್‌ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು ಪ್ರವೇಶ ಭಾಗದಲ್ಲೇ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಗಾದರು. ಪರೀಕ್ಷಾ ಕೊಠಡಿಗಳಲ್ಲಿ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆದರು.

ಬೆಳಗಿನ ಅವಧಿಯಲ್ಲಿ ನಡೆದ ಭೌತಶಾಸ್ತ್ರ ಪರೀಕ್ಷೆಗೆ 5,320 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಅಂತಿಮವಾಗಿ 4,900 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ವಿಷಯದ ಪರೀಕ್ಷೆಗೆ ಜಿಲ್ಲೆಯಲ್ಲಿ ಹೆಸರು ನೋಂದಾಯಿಸಿದ್ದ 5,320 ವಿದ್ಯಾರ್ಥಿಗಳ ಪೈಕಿ 4,896 ಮಂದಿ ಪರೀಕ್ಷೆ ಬರೆದರು.

ವಿದ್ಯಾರ್ಥಿಗಳು ಕೇಂದ್ರ ಪ್ರವೇಶಿಸುವಾಗ ಮತ್ತು ಪರೀಕ್ಷೆ ಮುಗಿಸಿ ಕೇಂದ್ರಗಳಿಂದ ಹೊರ ಹೋಗುವಾಗ ಅಂತರ ಕಾಯ್ದುಕೊಳ್ಳುವಂತೆ ಹೆಚ್ಚಿನ ನಿಗಾ ವಹಿಸಲಾಗಿತ್ತು. ಪ್ರತಿ ಕೇಂದ್ರದಲ್ಲೂ ಧ್ವನಿವರ್ಧಕ ಅಳವಡಿಸಿ ಕೊರೊನಾ ಸೋಂಕಿನ ಸಂಬಂಧ ವಿದ್ಯಾರ್ಥಿಗಳಿಗೆ ಜಾಗೃತಿ ಸಂದೇಶ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT