ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಮ್ಮ ಜಯಂತಿ ಸರಳ ಆಚರಣೆ

Last Updated 15 ಅಕ್ಟೋಬರ್ 2019, 15:51 IST
ಅಕ್ಷರ ಗಾತ್ರ

ಕೋಲಾರ: ‘ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ ತಿಳಿಸಿದರು.

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಸಂಬಂಧ ಇಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಪ್ರವಾಹ ಪರಿಸ್ಥಿತಿಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋಟ್ಯಂತರ ರೂಪಾಯಿ ಬೆಳೆ ಹಾನಿಯಾಗಿದೆ. ಮನೆ ಹಾಗೂ ಜಾನುವಾರು ಕೊಚ್ಚಿ ಹೋಗಿವೆ’ ಎಂದರು.

‘ನೆರೆ ಸಂತ್ರಸ್ತರು ಸೂರು ಹಾಗೂ ಆಹಾರಕ್ಕೆ ಕಷ್ಟಪಡುತ್ತಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾಮಗಾರಿ ನಡೆಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಹೀಗಾಗಿ ಎಲ್ಲಾ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ. ಜಯಂತಿ ಆಚರಣೆಗೆ ಮೀಸಲಾದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು’ ಎಂದು ಹೇಳಿದರು.

‘ಅ.23ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಿಸಲಾಗುತ್ತದೆ. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಹರಿಕಥೆ ವಿದ್ವಾನ್‌ ಎನ್.ಆರ್.ಜ್ಞಾನಮೂರ್ತಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT