ಶುಕ್ರವಾರ, ಫೆಬ್ರವರಿ 28, 2020
19 °C

ನಾಯಕರ ವಿರುದ್ಧ ಆರೋಪ ಮಾಡಿದರೆ ಸಹಿಸಲ್ಲ: ಶಾಸಕ ಕೆ.ವೈ.ನಂಜೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪ ಮಾಡಿದರೆ ಸಹಿಸಲ್ಲ, ಅಧಿಕಾರದಲ್ಲಿ ಇರುವವರು ಜವಾಬ್ದಾರಿಯಿಂದ ನಡೆದುಕೊಳ್ಳುವುದು ಉತ್ತಮ’ ಎಂದು ಶಾಸಕ ಕೆ.ವೈ.ನಂಜೇಗೌಡ ಎಚ್ಚರಿಕೆ ನೀಡಿದರು.

ನಗರ ಹೊರವಲಯದ ಕೋಚಿಮುಲ್ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನನ್ನ ನಾಯಕರು, ನನ್ನ ಪಕ್ಷದ ಬಗ್ಗೆ ಇಲ್ಲಸಲ್ಲದ್ದನ್ನು ನನ್ನ ಎದುರು ಮಾತನಾಡಿದರೆ ಸುಮ್ಮನೆ ಬಿಡುವುದಿಲ್ಲ’ ಎಂದು ತಿರುಗೇಟು ನೀಡಿದರು.

‘ಜಿಲ್ಲೆಯಲ್ಲಿ ಯಾರು ರಿಯಲ್‌ ಎಸ್ಟೇಟ್ ನಡೆಸುತ್ತಿದ್ದಾರೆ ಎಂಬ ಅರಿವು ಜನಕ್ಕೆ ಇದೆ. ಅತಿ ಶೀಘ್ರದಲ್ಲೇ ಇದಕ್ಕೆ ಉತ್ತರ ಸಿಗುತ್ತದೆ. ಸಾರ್ವಜನಿಕ ಕ್ಷೇತ್ರದಲ್ಲಿರುವ ಜನಪ್ರತಿನಿಧಿ ಜವಾಬ್ದಾರಿಯಿಂದ ಮಾತನಾಡಬೇಕು’ ಎಂದು ಸಲಹೆ ನೀಡಿದರು.

ರೈಲು ತಯಾರಿಕ ಘಟಕದ ವಿಚಾರವಾಗಿ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ಸಂಸದ ಎಸ್.ಮುನಿಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ, ‘ನಮ್ಮ ಪಕ್ಷದ ನಾಯಕರು ರಿಯಲ್ ಎಸ್ಟೇಟ್ ಮಾಡುವವರಲ್ಲ. ಅಂತಹ ಕೆಲಸ ಮಾಡುವವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಬಿಡಿ’ ಎಂದು ಹೇಳಿದರು.

‘ರೈಲು ತಯಾರಿಕ ಘಟಕ ಸ್ಥಾಪನೆಗೆ ಒತ್ತಾಯಿಸಿ ಹೋರಾಟಕ್ಕೆ ಮುಂದಾಗಿರುವ ಮಾಜಿ ಸಂಸದ ಕೆ.ಎಚ್.ಮುನಿಯಪ್ಪವರಿಗೆ ನಾನು ಬೆಂಬಲ ನೀಡುತ್ತೆನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರಾದ ಕೆ.ಎಚ್.ಮುನಿಯಪ್ಪ, ರಮೇಶ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ನಾನು ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ, ಅವರ ಹೇಳಿಕೆಗೆ ಸಂಪೂರ್ಣ ಸಹಮತ ಇದೆ’ ಎಂದು ತಿಳಿಸಿದರು.

ಕೋಚಿಮುಲ್ ಒಕ್ಕೂಟಕ್ಕೆ ಸಂಸದರು ಮಾತ್ರವಲ್ಲದೆ ಅವಿಭಜಿತ ಜಿಲ್ಲೆಯ ಮಂತ್ರಿಗಳು, ಎಲ್ಲಾ ಶಾಸಕರು ಯಾವುದೇ ಸಮಯದಲ್ಲಾರೂ ಭೇಟಿ ನೀಡಲಿ. ಆಹ್ವಾನಿಸಲು ನಾವು ಸಿದ್ಧವಿದ್ದೇವೆ, ಯಾವುದೇ ಅಂಜಿಕೆ ಇಲ್ಲ. ಅವರಿಂದ ಒಕ್ಕೂಟಕ್ಕೆ ಆಗುವ ಸಹಕಾರವನ್ನು ಪಡೆದುಕೊಳ್ಳಲು ನಾವು ಸಿದ್ದರಿದ್ದೆವೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು