ಬಂಗಾರಪೇಟೆ: ತಾಲ್ಲೂಕಿನ ಚಿಗರಲೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಮತ್ತು ಕಾಂಪೌಂಡ್ ನಿರ್ಮಾಣ ಅರ್ಧಕ್ಕೆ ನಿಂತಿದ್ದು, ನಿತ್ಯ ಮಕ್ಕಳು ಬಯಲು ಶೌಚಕ್ಕೆ ಹೋಗುವಂತಾಗಿದೆ.

ಶೌಚಾಲಯ ನಿರ್ಮಾಣಕ್ಕೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ ಮೇರೆಗೆ ನರೇಗಾ ಯೋಜನೆಯಡಿ ₹4.3 ಲಕ್ಷ ವೆಚ್ಚದಲ್ಲಿ ಶೌಚಾಲಯ ಹಾಗೂ ₹3 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಆದರೆ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ವಿದ್ಯಾರ್ಥಿಗಳು ಬಯಲು ಶೌಚಕ್ಕೆ ಹೋಗಬೇಕಾಗಿದೆ. ಹಾಗಾಗಿ ಶೀಘ್ರ ಶೌಚಾಲಯ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು, ಶಿಕ್ಷಕರು ಒತ್ತಾಯಿಸಿದ್ದಾರೆ.

ಬಹಿರ್ದೆಸೆ ಮುಕ್ತಗೊಳಿಸಲು ಮೂರು ವರ್ಷದ ಹಿಂದೆ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಆದರೆ, ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಮುಜುಗರ ಪಡುವಂತಾಗಿದೆ.

ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದರೆ ಕಾಮಗಾರಿಗೆ ಮಂಜೂರಾಗಿರುವ ಅನುದಾನ ಮಾತ್ರ ಪಡೆಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಶಾಲೆಯ ಕಾಂಪೌಂಡ್ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಬೇಗ ಪೂರ್ಣಗೊಳಿಸುತ್ತೇವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಸಂತೋಷ್ ಭರವಸೆ ನೀಡಿದರು.

ತಾಲ್ಲೂಕಿನಾದ್ಯಂತ ಶೌಚಾಲಯ ಮತ್ತು ಇತರೆ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತವಾಗಿರುವುದನ್ನು ಶೀಘ್ರ ಪೂರ್ಣಗೊಳಿಸಲು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ.
– ಜಿ.ಗುರುಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಂಗಾರಪೇಟೆ

ಕಾಂಪೌಂಡ್ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು ವಿಷ ಜಂತುಗಳ ಆವಾಸ ತಾಣವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಶೀಘ್ರ ಕಾಮಗಾರಿ ಪೂರ್ಣಗೊಳಿಸಿ.
– ಮಲ್ಲಪ್ಪ, ಪೋಷಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.