ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಗರಾಪುರ ಮೊರಾರ್ಜಿ ಶಾಲೆ: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

Published 30 ಜೂನ್ 2024, 16:02 IST
Last Updated 30 ಜೂನ್ 2024, 16:02 IST
ಅಕ್ಷರ ಗಾತ್ರ

ಕೆಜಿಎಫ್‌: ತಾಲ್ಲೂಕಿನ ಚಿಗರಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಶನಿವಾರ ಇಬ್ಬರು ವಿದ್ಯಾರ್ಥಿಗಳು ಕಾಣೆಯಾಗಿದ್ದಾರೆ.

ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಮುಳಬಾಗಿಲು ತಾಲ್ಲೂಕಿನ ದರ್ಶನ್‌ಕುಮಾರ್ ಮತ್ತು ಹರ್ಷವರ್ಧನ್‌ ನಾಪತ್ತೆಯಾದ ವಿದ್ಯಾರ್ಥಿಗಳು. ಭಾನುವಾರ ರಾತ್ರಿ ಮಕ್ಕಳ ಹಾಜರಾತಿ ತೆಗೆದುಕೊಳ್ಳುವಾಗ ಇಬ್ಬರು ವಿದ್ಯಾರ್ಥಿಗಳು ಕಾಣೆಯಾಗಿರುವುದು ಗೊತ್ತಾಗಿದೆ.

ಇಬ್ಬರೂ ಶನಿವಾರ ರಾತ್ರಿ ಕಾಂಪೌಂಡ್‌ ಹಾರಿ ಪರಾರಿಯಾಗಿದ್ದಾರೆ. ತಮ್ಮ ಕೊಠಡಿಯ ಬೀಗದ ಕೈಯನ್ನು ಭದ್ರತಾ ಕೊಠಡಿಯಲ್ಲಿ ಹಾಕಿ ಹೋಗಿದ್ದಾರೆ. ವಸತಿ ಶಾಲೆಯಲ್ಲಿ ಭದ್ರತಾ ಸಿಬ್ಬಂದಿ ಇಲ್ಲ.

ವಸತಿ ಶಾಲೆಯ ಸಿಬ್ಬಂದಿಯು ಪೋಷಕರು ಮತ್ತು ಸ್ನೇಹಿತರನ್ನು ಸಂಪರ್ಕಿಸಿದ್ದಾರೆ. ಆದರೆ ಅಲ್ಲೂ ಮಕ್ಕಳ ಸುಳಿವು ದೊರೆತಿಲ್ಲ. ವಿದ್ಯಾರ್ಥಿಗಳ ನಾಪತ್ತೆ ಕುರಿತು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲೆ ಭಾರತಿ ಅವರು ಭಾನುವಾರ ಬೇತಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT