ಬೇತಮಂಗಲ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಸುಮಾರು ₹20 ಲಕ್ಷ ಅನುದಾನದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಟಿ.ಗೊಲ್ಲಹಳ್ಳಿ ಪಿಡಿಒ ಶ್ರೀನಿವಾಸ್ ಮೂರ್ತಿ ತಿಳಿಸಿದರು.

ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗರಾಪುರ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಸ್ವಂತ ಕಟ್ಟಡವಿಲ್ಲದ ಕಾರಣ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 2 ವರ್ಷಗಳಿಂದ ಸೂಕ್ತ ನಿವೇಶನ ಮತ್ತು ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗಿದ್ದು, ಶೀಘ್ರವೇ ಅಂಗನವಾಡಿ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ಸಿಡಿಪಿಒ ರಾಜೇಶ್ ಮಾತನಾಡಿ, ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಸ್ಥಳದ ಇ ಖಾತೆ ಮಾಡಿರುವ ಸ್ಥಳವು ಅನ್ಯ ವ್ಯಕ್ತಿಯೊಬ್ಬರು ಅಕ್ರಮವಾಗಿ ಖಾತೆ ಮಾಡಿಸಿಕೊಂಡಿರುವ ಬಗ್ಗೆ ಚರ್ಚೆಯಾಗಿತ್ತು. ಆದ್ದರಿಂದ ಪಿಡಿಒ ಅವರೇ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದರು.

ಎವೈವಿಕೆ ರಾಜ್ಯ ಘಟಕದ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ಮಾತನಾಡಿ, ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಬೇಕೆಂಬ ತಮ್ಮ ಕೋರಿಕೆಗೆ ಅಧಿಕಾರಿಗಳು ತ್ವರಿತವಾಗಿ ಮನ್ನಣೆ ನೀಡಿದ್ದಾರೆ ಎಂದರು.

ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀರಾಮಪ್ಪ, ಸತೀಶ್, ಕರೆ ವಸೂಲಿಗಾರ ದೇವೆಗೌಡ, ಮುನಿಯಪ್ಪ, ಮುಖಂಡ ಗೋವಿಂದಪ್ಪ, ಯಲ್ಲಪ್ಪ, ಸುರೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.