ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ: ಇಬ್ಬರಿಗೆ ತಲಾ 2 ವರ್ಷ ಶಿಕ್ಷೆ

Published 22 ಮೇ 2023, 6:15 IST
Last Updated 22 ಮೇ 2023, 6:15 IST
ಅಕ್ಷರ ಗಾತ್ರ

ಕೋಲಾರ: 15 ವರ್ಷದ ಬಾಲಕಿಯನ್ನು ವಿವಾಹವಾಗಿ ಅತ್ಯಾಚಾರವೆಸಗಿದ್ದ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಸಲ್ಮಾನ್‌ ಪಾಷ ಅಲಿಯಾಸ್‌ ಸಲ್ಮಾನ್‌ (28) ಎಂಬ ಯುವಕ ಹಾಗೂ ಆತನಿಗೆ ಸಹಕರಿಸಿದ ಸಲ್ಮಾ ಎಂಬ ವ್ಯಕ್ತಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ ತಲಾ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. 

ಕೋಲಾರ ತಾಲ್ಲೂಕಿನ ವೇಮಗಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2021ರ ಆಗಸ್ಟ್‌ 7ರಂದು ಘಟನೆ ನಡೆದಿದ್ದು, ಕೋಲಾರ ನಗರ ಮಹಿಳಾ ಠಾಣೆ ಪೊಲೀಸರು ಯುವಕನ ಮೇಲೆ ಪೋಕ್ಸೊ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.‌ ತನಿಖೆ ನಡೆಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು ಶನಿವಾರ ಇಬ್ಬರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ತಲಾ 2 ವರ್ಷ ಜೈಲು ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT