ಶುಚಿತ್ವದ ಸಂದೇಶಕ್ಕೆ ಮಕ್ಕಳೇ ರಾಯಭಾರಿ

7

ಶುಚಿತ್ವದ ಸಂದೇಶಕ್ಕೆ ಮಕ್ಕಳೇ ರಾಯಭಾರಿ

Published:
Updated:
Deccan Herald

ಕೋಲಾರ: ‘ಶುಚಿತ್ವದ ಸಂದೇಶ ಸಾರಲು ಮಕ್ಕಳೇ ರಾಯಭಾರಿಗಳಾಗಬೇಕು. ಪ್ರತಿ ಮನೆಯಲ್ಲೂ ಪೋಷಕರಿಗೆ ಸ್ವಚ್ಛತೆಯ ಪಾಠವಾಗಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹರಟಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಚ್ಛ ಸರ್ವೇಕ್ಷಣಾ ಕಾರ್ಯಕ್ರಮದಲ್ಲಿ ಮಾತನಾಡಿ, ‘ಶಿಕ್ಷಕರು ವಿದ್ಯಾರ್ಥಿಗಳು ಸ್ವಚ್ಛತೆಯ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.

‘ಸ್ವಚ್ಛತೆಯು ಜನರ ಆದ್ಯ ಕರ್ತವ್ಯ. ಮಕ್ಕಳು ಜಾಗೃತರಾದರೆ ಸಮಾಜವನ್ನು ತಿದ್ದುತ್ತಾರೆ. ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಾಣ ಮತ್ತು ಬಳಕೆ ಬಗ್ಗೆ ಮಕ್ಕಳನ್ನು ಜಾಗೃತಗೊಳಿಸಬೇಕು. ಶುಚಿತ್ವದ ಗುಣಗಾನವಾದಾಗ ಮಾತ್ರ ಮಕ್ಕಳ ಅಂತರಂಗ ಮತ್ತು ಬಹಿರಂಗ ಶುದ್ಧಿಯಾಗುತ್ತದೆ. ಸ್ವಚ್ಛತಾ ಕಾರ್ಯ ಜನಾಂದೋಲನದಂತೆ ನಡೆಯಬೇಕು’ ಎಂದು ಕಿವಿಮಾತು ಹೇಳಿದರು.

ಸ್ವಚ್ಛತೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಜಿ.ಶ್ರೀನಿವಾಸ್, ಶಿಕ್ಷಕರಾದ ಎಂ.ಕೃಷ್ಣಪ್ಪ, ಪಿ.ಎಂ.ಗೋವಿಂದಪ್ಪ, ಎಂ.ಆರ್.ಮೀನಾ, ಆರ್.ಮಂಜುಳಾ, ಎಚ್.ಮುನಿಯಪ್ಪ, ಕೆ.ಮಮತಾ ಪಾಲ್ಗೊಂಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !