ಬಂಗಾರಪೇಟೆ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವೆಂಕಟಗಿರಿ ಕೋಟೆಯಲ್ಲಿ ಮಂಗಳವಾರ ಮುಂಜಾನೆ ಎಬಿಎನ್ ಆಂಧ್ರ ಜ್ಯೋತಿ ವಾಹಿನಿಯ ವರದಿಗಾರ ವಿ.ಕೋಟಾದ ಜಗನ್ಮೋಹನ್ ರೆಡ್ಡಿ (45) ಹತ್ಯೆ ನಡೆದಿದೆ.

ಜಗನ್ಮೋಹನ್ ರೆಡ್ಡಿ ಅವರು ಮಂಗಳವಾರ ಮುಂಜಾನೆ ವಾಕಿಂಗ್ ಮಾಡುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ದಾಳಿ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ಜಗನ್ಮೋಹನ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾದ ರೌಡಿ ಶೀಟರ್ ಒಬ್ಬನ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆತನ ಚಲನವಲನಗಳ ಕುರಿತು ಮಾಹಿತಿ ಕಲೆ ಹಾಕಲು ವಿಶೇಷ ತಂಡ ರಚಿಸಲಾಗಿದೆ.

ಈ ಹತ್ಯೆಯು ಅವರು ಮಾಡಿದ ವೃತ್ತಿಪರ ವರದಿಗಳ ಹಿನ್ನೆಲೆ ನಡೆದಿದೆಯೇ ಅಥವಾ ಹಳೆಯ ವೈಯಕ್ತಿಕ ವೈಷಮ್ಯ ಕಾರಣವೇ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

ವಿ.ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-18-788437886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.