ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿನಿ ಹಾಗೂ ಅವರ ಕುಟುಂಬಸ್ಥರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಒತ್ತಾಯಿಸಿದರು.
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೊಳಗಾದ ಯುವತಿ ಹಾಗೂ ಕುಟುಂಬದವರನ್ನು ಭೇಟಿ ಮಾಡಿದ ಬಳಿಕ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬಿಜೆಪಿ ಮಹೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸಪುರ ರಾಮಾಂಜಿ, ಎಸ್ಸಿ ಮೋರ್ಚಾ ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಶ್ರೀನಾಥ್‍ಬಾಬು, ಪ್ರಧಾನ ಕಾರ್ಯದರ್ಶಿ ರಾಜು, ಉಪಾಧ್ಯಕ್ಷ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.