ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕನಿಗೆ ದಂಡ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ಪರಿಶಿಷ್ಟ ಜಾತಿ ಬಾಲಕನಿಗೆ ದಂಡ; ‘ಪ್ರಜಾವಾಣಿ’ ವರದಿ ಉಲ್ಲೇಖ
Last Updated 22 ಸೆಪ್ಟೆಂಬರ್ 2022, 8:25 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿ ಗ್ರಾಮದಲ್ಲಿ ದೇವರ ಗುಜ್ಜಕೋಲು ಮುಟ್ಟಿದ ಕಾರಣಕ್ಕೆ ಪರಿಶಿಷ್ಟ ಜಾತಿಯ ಬಾಲಕನ ಮೇಲೆ ಗ್ರಾಮದ ಕೆಲ ಮುಖಂಡರು ಹಲ್ಲೆ ಮಾಡಿ, ದಂಡ ವಿಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಈ ಸಂಬಂಧ ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿದೆ. ವರದಿಯ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಿದೆ.

ಈ ವಿಚಾರವಾಗಿ ಉಳ್ಳೇರಹಳ್ಳಿಗೆ ಸೆ.23ರಂದು ಬೆಳಿಗ್ಗೆ ಭೇಟಿ ನೀಡುತ್ತಿದ್ದು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳೊಂದಿಗೆ ಸಭೆ ಆಯೋಜಿಸಲು ಏರ್ಪಾಟು ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಆಯೋಗದ ಅಧ್ಯಕ್ಷರು ಸೂಚನೆ ನೀಡಿದ್ದಾರೆ.

‘ಘಟನೆಯ ವಿಚಾರವಾಗಿ ಇಲಾಖೆಯಿಂದ ಕೈಗೊಡಿರುವ ಕ್ರಮಗಳನ್ನು ಭೇಟಿಯ ಸಂದರ್ಭದಲ್ಲಿ ಆಯೋಗಕ್ಕೆ ನೀಡಬೇಕು’ ಎಂದು ನಿರ್ದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT