ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಚನ ವಾಚನ ಸ್ಪರ್ಧೆ: ಬಹುಮಾನ ವಿತರಣೆ

Last Updated 28 ಜೂನ್ 2021, 14:28 IST
ಅಕ್ಷರ ಗಾತ್ರ

ಕೋಲಾರ: ಮನ್ವಂತರ ಪ್ರಕಾಶನ ಹಾಗೂ ಮನ್ವಂತರ ಜನ ಸೇವಾ ಟ್ರಸ್ಟ್ ಸಹಯೋಗದಲ್ಲಿ 1ನೇ ತರಗತಿಯಿಂದ 7ನೇ ತರಗತಿವರೆಗಿನ ಮಕ್ಕಳಿಗೆ ಹಮ್ಮಿಕೊಂಡಿದ್ದ ವಚನ ವಾಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮಂಗಳವಾರ (ಜೂನ್‌ 29) ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ವರ್ಷದಂತೆ ಈ ಬಾರಿಯೂ ಮೇ ತಿಂಗಳಲ್ಲಿ ಆನ್‌ಲೈನ್ ಮೂಲಕ ಸ್ಪರ್ಧೆ ನಡೆಸಲಾಗಿತ್ತು. ಜಿಲ್ಲಾ ಕೇಂದ್ರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿಜೇತ ಮಕ್ಕಳಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳ 90 ಮಕ್ಕಳು ಮನೆಯಿಂದಲೇ ಆನ್‌ಲೈನ್ ಮೂಲಕ ವಚನ ವಾಚಿಸಿ ವಿಡಿಯೋ ಮಾಡಿ ಕಳುಹಿಸಿದ್ದರು. ಈ ಪೈಕಿ ಅತ್ಯುತ್ತಮವಾಗಿ ವಚನ ವಾಚನ ಮಾಡಿದ 64 ಮಕ್ಕಳು ವಿಜೇತರಾಗಿದ್ದಾರೆ. 8 ಮಂದಿ ಮೊದಲ ಬಹುಮಾನ, 10 ಮಂದಿ ದ್ವಿತೀಯ ಬಹುಮಾನ, 11 ಮಂದಿ ತೃತೀಯ ಬಹುಮಾನ, 16 ಮಕ್ಕಳು ವಿಶೇಷ ಬಹುಮಾನ, 19 ಮಂದಿ ಸಮಾಧಾನಕರ ಬಹುಮಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗದ 26 ಮಕ್ಕಳಿಗೂ ಪ್ರಮಾಣಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಸೂಚಿಸಿರುವ ಮಕ್ಕಳಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಣೆ ಮಾಡಲಿದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದ ಹೊರ ಜಿಲ್ಲೆಯ ಮಕ್ಕಳಿಗೆ ಆನ್‌ಲೈನ್ ಮೂಲಕ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ತಲುಪಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕೋವಿಡ್ ಸುರಕ್ಷತಾ ಮಾರ್ಗಸೂಚಿ ಪಾಲನೆಯೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತದೆ. ಗಡಿನಾಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ತಹಶೀಲ್ದಾರ್‌ ಶೋಭಿತಾ ಬಹುಮಾನ ವಿತರಿಸಿ ವಚನ ಸಾಹಿತ್ಯದಲ್ಲಿ ಮಹಿಳೆಯರ ಪಾತ್ರ ಕುರಿತು ಮಾತನಾಡುತ್ತಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಅಧ್ಯಕ್ಷ ಜೆ.ಜಿ.ನಾಗರಾಜ್ ಆಶಯ ಭಾಷಣ ಮಾಡುತ್ತಾರೆ. ಹರಿಕಥಾ ವಿದ್ವಾನ್ ಎನ್.ಆರ್.ಜ್ಞಾನಮೂರ್ತಿ ಅವರನ್ನು ಅಭಿನಂದಿಸಲಾಗುತ್ತದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT