ಶನಿವಾರ, ನವೆಂಬರ್ 28, 2020
26 °C

ವಿಪ್‌ ಉಲ್ಲಂಘನೆ: ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷಗಾದಿಯ ಚುನಾವಣೆಗೆ ಗೈರಾಗಿ ವಿಪ್‌ ಉಲ್ಲಂಘಿಸಿದ ಕಾರಣಕ್ಕೆ ಕಾಂಗ್ರೆಸ್‌ನ 3 ಮಂದಿ ನಗರಸಭಾ ಸದಸ್ಯರನ್ನು ಪಕ್ಷದಿಂದ ಅಮಾನತು ಮಾಡಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಭಾನುವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.

31ನೇ ವಾರ್ಡ್‌ ಸದಸ್ಯ ಸೈಯದ್ ಅಫ್ಜರ್‌, 33ನೇ ವಾರ್ಡ್‌ ಸದಸ್ಯೆ ನಾಜೀಯಾ ತಾಜ್ ಮತ್ತು 34ನೇ ವಾರ್ಡ್‌ ಸದಸ್ಯೆ ಮುಬೀನಾ ತಾಜ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದ ಎಲ್ಲಾ ಸದಸ್ಯರಿಗೆ ಚುನಾವಣೆಯಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಪರ ಮತ ಚಲಾಯಿಸುವಂತೆ ವಿಪ್‌ ಜಾರಿ ಮಾಡಲಾಗಿತ್ತು. ಆದರೆ, ಈ ಮೂವರು ಚುನಾವಣೆಗೆ ಗೈರಾಗಿ ವಿಪ್‌ ಉಲ್ಲಂಘಿಸಿದ ಕಾರಣ ಅಮಾನತು ಮಾಡಲಾಗಿದೆ ಎಂದು ಚಂದ್ರಾರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.