ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಸರ್ಕಾರ ಪತನದ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Published 29 ಜನವರಿ 2024, 16:16 IST
Last Updated 29 ಜನವರಿ 2024, 16:16 IST
ಅಕ್ಷರ ಗಾತ್ರ

ಕೋಲಾರ: ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಮ್ಮ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿದರೆ ಒಂದು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಮನೆಗೆ ಕಳುಹಿಸುತ್ತೇವೆ. ಇದು ನಾವು ರಾಜ್ಯದ ಜನರಿಗೆ ನೀಡುವ ಗ್ಯಾರಂಟಿ’ ಎಂದು ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸೋಮವಾರ ಬಿಜೆಪಿ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ, ವರ್ಗಗಳಿಗೆ ನೀಡಬೇಕಾಗಿದ್ದ ಮೀಸಲಾತಿ ಹಂಚಿದ್ದು ನಾವು. ಕಾಂಗ್ರೆಸ್ಸಿನವರು ದಲಿತರನ್ನು ವಂಚಿಸಿ ಅವರ ಹಣದಲ್ಲಿ ಗ್ಯಾರಂಟಿ ನೀಡುತ್ತಿದ್ದಾರೆ’ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಕಾಂತರಾಜ ವರದಿ ಸ್ವೀಕರಿಸುವುದಾಗಿ ಹೇಳಿರುವುದು ಚುನಾವಣಾ ಗಿಮಿಕ್ ಆಗಿದೆ. ವರದಿ ಸ್ವೀಕರಿಸಿದ ಕೂಡಲೇ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲಿದೆ. ಆಮೇಲೆ ಚುನಾವಣೆ ಮುಗಿದ ಬಳಿಕ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಹೇಳುತ್ತಾರೆ’ ಎಂದು ಟೀಕಿಸಿದರು.

‘ಶೋಷಿತರ ಸಮಾವೇಶದಲ್ಲೇ ಶೋಷಿತ ಸಮುದಾಯದ ಹಾಗೂ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತಂತೆ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಸಂಸ್ಕೃತಿ ಪ್ರದರ್ಶಿಸಿದ್ದಾರೆ’ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT