ಭಾನುವಾರ, ಜೂಲೈ 5, 2020
24 °C

ಇಂಧನ ಬೆಲೆ ಹೆಚ್ಚಳ; ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ/ ಚಿಕ್ಕಬಳ್ಳಾಪುರ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಜಿಲ್ಲೆಯ ವಿವಿಧೆಡೆ ಸೋಮವಾರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರದಲ್ಲಿ ಗಾಂಧಿವನದಿಂದ ತಹಶೀಲ್ದಾರ್ ಕಚೇರಿವರೆಗೆ ಸೈಕಲ್ ರ್‍ಯಾಲಿ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಮಾಲೂರಿನಲ್ಲಿ ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಪಟ್ಟಣದ ಬಾಲಾಜಿ ವೃತ್ತದಿಂದ ತಾಲ್ಲೂಕು ಕಚೇರಿಯವರೆಗೆ ಸೈಕಲ್ ಹಾಗೂ ಎತ್ತಿನ ಗಾಡಿ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಂಗಾರಪೇಟೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಿಕ್ಕಬಳ್ಳಾಪುರ ನಗರದ ಬಿ.ಬಿ.ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿಯಿಂದ ತಾಲ್ಲೂಕು ಕಚೇರಿವರೆಗೆ ಕಾಲ್ನಡಿಗೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಮುಖಂಡ ಯಲುವಹಳ್ಳಿ ರಮೇಶ್, ಕೆ.ವಿ.ನವೀನ್ ಕಿರಣ್, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್ ಮತ್ತಿತರರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು