ಕೋಲಾರ: ‘ವರಿಷ್ಠರ ಸೂಚನೆಯಂತೆ ಜಿಲ್ಲೆಯ 6 ವಿಧಾನಸಭೆ ಕ್ಷೇತ್ರಗಳಲ್ಲೂ ಪಕ್ಷ ಸಂಘಟನೆಗೆ ಎಸ್ಸಿ-ಎಸ್ಟಿ ಸಮಾವೇಶ ಹಮ್ಮಿಕೊಳ್ಳುತ್ತೇವೆ’ ಎಂದು ಕಾಂಗ್ರೆಸ್ ಎಸ್ಸಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಯದೇವ್ ತಿಳಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ. ‘ಮೊದಲಿಗೆ ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಮೇ 16ರಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಸಲಾಗುತ್ತದೆ. ನಂತರ ಉಳಿದ ಕ್ಷೇತ್ರಗಳಲ್ಲಿ ಸಮಾವೇಶ ಆಯೋಜಿಸುತ್ತೇವೆ. ಪ್ರತಿ ಕ್ಷೇತ್ರದಲ್ಲೂ ಸಮಾವೇಶಕ್ಕೆ 10 ಸಾವಿರ ಜನ ಸೇರಲಿದ್ದು, ಮಾಜಿ ಸಂಸದ ಕೆ.ಎಚ್.ಮುನಿಯಪ್ಪರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ’ ಎಂದು ವಿವರಿಸಿದರು.

‘ಎಐಸಿಸಿ ಮತ್ತು ಕೆಪಿಸಿಸಿ ಆದೇಶದಂತೆ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪಕ್ಷದ ಶಾಸಕರು ಇಲ್ಲದಿದ್ದರೂ 54 ಸಾವಿರ ಸದಸ್ಯತ್ವ ಮಾಡಿಸಿದ್ದೇವೆ’ ಎಂದು ಮಾಹಿತಿ ನೀಡಿದರು.

‘ಕೋಲಾರ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ಸಿಕ್ಕ ಸಿಕ್ಕವರಿಗೆಲ್ಲಾ ಟಿಕೆಟ್ ನೀಡಲು ಸಾಧ್ಯವಿಲ್ಲ. ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯರಿಗೆ ಟಿಕೆಟ್: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರಕ್ಕೆ ಸ್ಥಳೀಯರಿಗೆ ಪಕ್ಷದ ಟಿಕೆಟ್ ಕೊಡುವಂತೆ ವರಿಷ್ಠರನ್ನು ಒತ್ತಾಯಿಸುತ್ತೇವೆ. ಹೊರಗಿನ ವ್ಯಕ್ತಿಗಳಿಗೆ ಟಿಕೆಟ್ ಕೊಡುವುದಕ್ಕೆ ವಿರೋಧವಿದೆ’ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ಬಾಬು ಹೇಳಿದರು.

‘ಒಕ್ಕಲಿಗ ಸಮುದಾಯದವರಿಗೆ ಪಕ್ಷದ ಟಿಕೆಟ್ ಕೊಡುವುದಾದರೆ ನಾನು ಸಹ ಆಕಾಂಕ್ಷಿಯಾಗಿದ್ದೇನೆ. ನಾನು ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಟಿಕೆಟ್ ಕೊಟ್ಟರೆ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಉದಯ್ಶಂಕರ್, ಪಕ್ಷದ ಮುಖಂಡರಾದ ರಾಮಯ್ಯ, ಬಾಬು, ಇಕ್ಬಾಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.