ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸಾಧನೆಯೇ ಗೆಲುವಿಗೆ ಶ್ರೀರಕ್ಷೆ

Last Updated 3 ಮೇ 2019, 11:35 IST
ಅಕ್ಷರ ಗಾತ್ರ

ಕೋಲಾರ: ‘ಹಿಂದಿನ ಕಾಂಗ್ರೆಸ್ ಸರ್ಕಾರದ ಸಾಧನೆಯೇ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರ ಗೆಲುವಿಗೆ ಶ್ರೀರಕ್ಷೆ’ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರಾಜೇಶ್‌ಸಿಂಗ್ ಹೇಳಿದರು.

ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮುನಿಯಪ್ಪ ಪರ ಇಲ್ಲಿನ ಗೌರಿಪೇಟೆಯಲ್ಲಿ ಬುಧವಾರ ಮನೆ ಮನೆಗೆ ತೆರಳಿ ಪ್ರಚಾರ ಮಾಡಿ, ‘ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಪಕ್ಷ ಬೇಧವಿಲ್ಲದೆ ಅಧಿಕಾರ ನಡೆಸಿದ್ದಾರೆ. ಅವರು ಜಾರಿಗೊಳಿಸಿದ ಜನಪರ ಯೋಜನೆಗಳು ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತವೆ’ ಎಂದು ತಿಳಿಸಿದರು.

‘ಸಿದ್ದರಾಮಯ್ಯ ಸಮಾಜದ ಕಟ್ಟಕಡೆಯ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಿದರು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಅನುಕೂಲಕ್ಕಾಗಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದರು. ಮಹಿಳೆಯರು, ರೈತರ, ಯುವಕರ ಸಬಲೀಕರಣಕ್ಕೆ ಒತ್ತು ನೀಡಿದರು’ ಎಂದರು.

‘ಮುನಿಯಪ್ಪ ಅವರು ಕ್ಷೇತ್ರದಲ್ಲಿ ಸತತ 7 ಬಾರಿ ಗೆದ್ದು ಸಂಸದರಾಗಿದ್ದಾರೆ. ಈ ಬಾರಿಯೂ ಅವರ ಗೆಲುವು ನಿಶ್ಚಿತ. ಮತದಾರರು ಕೋಮುವಾದಿ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸಬೇಕು. ಬೆಂಗಳೂರಿನಿಂದ ಇಲ್ಲಿಗೆ ವಲಸೆ ಬಂದಿರುವ ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿ ಅವರಿಗೆ ಕ್ಷೇತ್ರದ ಸಮಸ್ಯೆಗಳ ಅರಿವಿಲ್ಲ’ ಎಂದು ದೂರಿದರು.

‘ತಾಲ್ಲೂಕಿನ ನರಸಾಪುರ, ವೇಮಗಲ್ ಭಾಗದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗುವಲ್ಲಿ ಮುನಿಯಪ್ಪರ ಶ್ರಮಿವಿದೆ. ಮುನಿಯಪ್ಪ ಮತ್ತು ಆಗಿನ ಜಿಲ್ಲಾಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪರಿಶ್ರಮದಿಂದ ಕೆ.ಸಿ ವ್ಯಾಲಿ ಯೋಜನೆ ಅನುಷ್ಠಾನಗೊಳ್ಳಲು ಸಾಧ್ಯವಾಗಿದೆ. ಆದರೆ, ಕೆಲ ವ್ಯಕ್ತಿಗಳು ರಾಜಕೀಯ ದುರುದ್ದೇಶದಿದ  ಅಪಪ್ರಚಾರ ಮಾಡುತ್ತಿದ್ದಾರೆ. ಮತದಾರರು ಇದಕ್ಕೆ ಕಿವಿಗೋಡಬಾರದು’ ಎಂದು ಮನವಿ ಮಾಡಿದರು.

‘ದೇಶದಲ್ಲಿ ರೈತರು, ಬಡವರು, ದಲಿತರು, ಅಲ್ಪಸಂಖ್ಯಾತರು ನೆಮ್ಮದಿಯಿಂದ ಇರಲು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಬೇಕು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಭವಿಷ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪಕ್ಷದ ಮುಖಂಡರಾದ ಶಾಂತಕುಮಾರ್, ಉದಯ್ ಕುಮಾರ್, ಶಹಿನ್ ಷಾ, ಮಹಮ್ಮದ್‌ ಅಯಾಜ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT