ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿಗಳ ಬಂಡಾಯ ನಿವೃತ್ತ ಸಿಜೆಐ ಠಾಕೂರ್ ಟೀಕೆ

Last Updated 19 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಜನವರಿ 12ರಂದು ನಡೆಸಿದ್ದ ಮಾಧ್ಯಮಗೋಷ್ಠಿಯನ್ನು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ (ಸಿಜೆಐ) ಟಿ.ಎಸ್. ಠಾಕೂರ್ ಟೀಕಿಸಿದ್ದಾರೆ.

‘ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹೊರಗಿನವರ ನೆರವು ಕೇಳುವ ಅವಶ್ಯಕತೆ ಇರಲಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಇದರಿಂದಾಗಿ, ಸುಪ್ರೀಂ ಕೋರ್ಟ್‌ ವ್ಯಾಪ್ತಿ ಒಳಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕಾಗಿದ್ದ ಸಮಸ್ಯೆಗಳ ಕುರಿತು ಮಾಧ್ಯಮ ಮತ್ತು ರಾಜಕಾರಣಿಗಳಿಗೆ ಮಾತನಾಡಲು ಅವಕಾಶ ನೀಡಿದಂತಾಯಿತು’ ಎಂದು ಠಾಕೂರ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಕಾರ್ಯವೈಖರಿ ವಿರುದ್ಧ ಹಿರಿಯ ನ್ಯಾಯಮೂರ್ತಿಗಳಾದ ಜೆ. ಚೆಲಮೆಶ್ವರ್, ರಂಜನ್ ಗೊಗೊಯಿ, ಮದನ್‌ ಬಿ.ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಬಹಿರಂಗವಾಗಿ ಬಂಡಾಯ ಎದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT