ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಆಸ್ಪತ್ರೆಯಲ್ಲಿ 12 ಕೊಠಡಿ ನಿರ್ಮಾಣ

Last Updated 18 ಜೂನ್ 2021, 17:46 IST
ಅಕ್ಷರ ಗಾತ್ರ

ಕೋಲಾರ: ‘ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರ ಅನುದಾನದಲ್ಲಿ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಸುಸಜ್ಜಿತ 12 ಕೊಠಡಿ ನಿರ್ಮಿಸಲಾಗುತ್ತಿದ್ದು, ಸಾಧ್ಯವಾದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಎಸ್‍ಎನ್‍ಆರ್ ಆಸ್ಪತ್ರೆ ಆವರಣದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡದ ಮೇಲ್ಭಾಗದಲ್ಲಿ ₹ 60 ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕೊಠಡಿಗಳ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

‘ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರೆಲ್ಲಾ ಒಟ್ಟಾಗಿ ಚರ್ಚಿಸಿ ಒಮ್ಮತದಿಂದ 12 ವಿಶೇಷ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡಿದ್ದೇವೆ. ಕಾಮಗಾರಿ ಜವಾಬ್ದಾರಿಯನ್ನು ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ನೀಡಿದ್ದು, 3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ವಿಶ್ವಾಸ ವ್ಯಕ್ತಪಡಿಸಿದರು.

‘ವೈದ್ಯರು, ಶುಶ್ರೂಷಕರು ಸೇರಿದಂತೆ ಅಧಿಕಾರಿಗಳಿಗೆ ಈ ವಿಶೇಷ ಕೊಠಡಿಗಳಿಂದ ಸಾಕಷ್ಟು ಅನುಕೂಲವಾಗಲಿದೆ. ಕೊಠಡಿಗಳಿಗೆ ಹೆಚ್ಚಿನ ಸೌಕರ್ಯ ಕಲ್ಪಿಸಲಾಗುತ್ತದೆ. ವೈದ್ಯಕೀಯ ಸಿಬ್ಬಂದಿ ಜಿಲ್ಲೆಯ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ನಜೀರ್ ಅಹಮ್ಮದ್‌, ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವಿಕುಮಾರ್‌, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT