ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ನೌಕರರ ಪ್ರತಿಭಟನೆ

Last Updated 30 ಸೆಪ್ಟೆಂಬರ್ 2020, 4:24 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ಮಂಗಳವಾರ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರ ಸಂಘದ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಶಿವಕುಮಾರ್‌ ಮಾತನಾಡಿ, ‘ಸರ್ಕಾರ ಈ ನೌಕರರ ಸೇವಾ ಭದ್ರತೆ ಸೇರಿದಂತೆ 14 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಪ್ರತಿಭಟನೆಯನ್ನು ಅನಿರ್ದಿಷ್ಟ ಅವಧಿಗೆ ಮುಂದುವರಿಸಲಾಗುವುದು. ಸೇವೆಯಲ್ಲಿ ಉಂಟಾಗುವ ವ್ಯತ್ಯಯಕ್ಕೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಹೇಳಿದರು.

ಕೋವಿಡ್‌–19 ಸಂಕಷ್ಟದ ನಡುವೆ ಈ ಸಂಘಟನೆಯ ನೌಕರರು ಜೀವದ ಮೇಲೆ ಹಂಗು ತೊರೆದು ರೋಗಿಗಳ ಸೇವೆಯಲ್ಲಿ ತೊಡಗಿದ್ದಾರೆ. ಸೋಂಕು ತಡೆಯಲು ಪೂರಕವಾಗಿ ಶ್ರಮಿಸುತ್ತಿದ್ದಾರೆ. ಆದರೂ ಸರ್ಕಾರ ಇವರ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನ ಹರಿಸದಿರುವುದು ವಿಪರ್ಯಾಸ ಎಂದು ಹೇಳಿದರು.

ಪ್ರತಿಭಟನೆ ಸಂದರ್ಭದಲ್ಲಿ ತಾಲ್ಲೂಕು ಕಚೇರಿ ಎದುರು ಉದ್ಯಾನದಲ್ಲಿನ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್‌ಗೆ ನೀಡಲಾಯಿತು.

ಮುಖಂಡ ಎಂ.ಉಮಾಶಂಕರ್‌, ತೇಜಸ್‌, ಹರೀಶ್‌, ಕವಿತಾ, ಶಂಕರಪ್ಪ, ನಾಗರಾಜ್‌, ಕೃಷ್ಣವೇಣಿ, ಪದ್ಮ, ನೇತ್ರಾವತಿ, ಸೈಯದ್‌ ಮಹಮದ್‌ ಪಾಷ, ಹರಿಪ್ರಸಾದ್‌, ಅಶೋಕ್‌ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT