ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 12 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 252ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್ ತಾಲ್ಲೂಕಿನ 7 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಒಬ್ಬರು, ಬಂಗಾರಪೇಟೆ ತಾಲ್ಲೂಕಿನ 4 ಮಂದಿ, ಕೆಜಿಎಫ್ ತಾಲ್ಲೂಕಿನ ಇಬ್ಬರು ಹಾಗೂ ಮುಳಬಾಗಿಲು ತಾಲ್ಲೂಕಿನ 6 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.