ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಸೋಂಕು ಗಣನೀಯ ಏರಿಕೆ

Last Updated 14 ಏಪ್ರಿಲ್ 2021, 11:05 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಿದ್ದು, ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಹೊಸದಾಗಿ 118 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 452ಕ್ಕೆ ಜಿಗಿದಿದೆ.

ಕೋಲಾರ ತಾಲ್ಲೂಕಿನ 33 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 28 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 24 ಮಂದಿಗೆ, ಮಾಲೂರು ತಾಲ್ಲೂಕಿನ 14 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 12 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 7 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 118 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 62 ಮಂದಿ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 15 ಮಂದಿ, ಮಾಲೂರು ತಾಲ್ಲೂಕಿನ 7, ಕೆಜಿಎಫ್‌ ತಾಲ್ಲೂಕಿನ 18 ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT