ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೊರೊನಾ ಸೋಂಕು ಗಣನೀಯ ಏರಿಕೆ

Last Updated 26 ಅಕ್ಟೋಬರ್ 2020, 14:24 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯ ಏರಿಕೆಯಾಗಿದ್ದು, ಸೋಮವಾರ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಅರ್ಧ ಶತಕದ ಗಡಿ ದಾಟಿತು.

ಇದರ ಬೆನ್ನಲ್ಲೇ ಶ್ರೀನಿವಾಸಪುರ ತಾಲ್ಲೂಕಿನ ಸೋಂಕಿತರೊಬ್ಬರು ಕೊನೆಯುಸಿರೆಳೆದಿದ್ದು, ಸೋಂಕಿತರ ಸಾವಿನ ಸಂಖ್ಯೆ 150ಕ್ಕೆ ಏರಿಕೆಯಾಯಿತು.

77 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 777ಕ್ಕೆ ಜಿಗಿದಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ಅತಿ ಹೆಚ್ಚು ತಲಾ 16 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನ 14, ಮಾಲೂರು ತಾಲ್ಲೂಕಿನ 15, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 8 ಮಂದಿಗೆ ಸೋಂಕು ಬಂದಿದೆ. ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

60 ಮಂದಿ ಗುಣಮುಖ: ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 60 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 21, ಮಾಲೂರು ತಾಲ್ಲೂಕಿನ 6, ಬಂಗಾರಪೇಟೆ ತಾಲ್ಲೂಕಿನ 11, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 9 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT