ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಗುರುವಾರ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಬಂಗಾರಪೇಟೆ ತಾಲ್ಲೂಕಿನ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 166ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 20 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 591ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 9 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಮಾಲೂರು ತಾಲ್ಲೂಕಿನ 6, ಕೆಜಿಎಫ್ ತಾಲ್ಲೂಕಿನ 2 ಮತ್ತು ಮುಳಬಾಗಿಲು ತಾಲ್ಲೂಕಿನ 3 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.

ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 54 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 15, ಮಾಲೂರು ತಾಲ್ಲೂಕಿನ 11, ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ 8, ಮುಳಬಾಗಿಲು ತಾಲ್ಲೂಕಿನ 7 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.