ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಮುಂದುವರಿದ ಸಾವಿನ ಸರಣಿ

Last Updated 3 ಡಿಸೆಂಬರ್ 2020, 16:13 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಗುರುವಾರ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಮಾಲೂರು ತಾಲ್ಲೂಕಿನ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಹೊಸದಾಗಿ 13 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 126ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 7 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನ ಇಬ್ಬರಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 7 ಮಂದಿ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 3 ಮಂದಿ, ಬಂಗಾರಪೇಟೆ ತಾಲ್ಲೂಕಿನ ಇಬ್ಬರು ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT