ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ ಮುಂದುವರಿದ ಕೋವಿಡ್ ಸೋಂಕಿತರ ಸಾವಿನ ಸರಣಿ

Last Updated 16 ಅಕ್ಟೋಬರ್ 2020, 16:46 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಶುಕ್ರವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 103 ಮಂದಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 26 ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನ 20, ಬಂಗಾರಪೇಟೆ ತಾಲ್ಲೂಕಿನ 11, ಕೆಜಿಎಫ್‌ ತಾಲ್ಲೂಕಿನ 25, ಮುಳಬಾಗಿಲು ತಾಲ್ಲೂಕಿನ 5 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 16 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

ದಾಖಲೆ ಏರಿಕೆ: ಹೊಸದಾಗಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದವರ ಸಂಖ್ಯೆ ಶುಕ್ರವಾರ ಶತಕದ ಗಡಿ ದಾಟಿತು.

ಕೋಲಾರ ತಾಲ್ಲೂಕಿನ 87, ಮಾಲೂರು ತಾಲ್ಲೂಕಿನ 27, ಬಂಗಾರಪೇಟೆ ತಾಲ್ಲೂಕಿನ 15, ಕೆಜಿಎಫ್‌ ತಾಲ್ಲೂಕಿನ 20, ಮುಳಬಾಗಿಲು ತಾಲ್ಲೂಕಿನ 28 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT