ಬುಧವಾರ, ಅಕ್ಟೋಬರ್ 28, 2020
21 °C

ಕೊರೊನಾ: ಸಾವಿನ ಸಂಖ್ಯೆ 126ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಗುರುವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 126ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 104 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,467ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಲಾರಂಭಿಸಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 25 ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನ 19, ಬಂಗಾರಪೇಟೆ ತಾಲ್ಲೂಕಿನ 10, ಕೆಜಿಎಫ್ ತಾಲ್ಲೂಕಿನ 21, ಮುಳಬಾಗಿಲು ತಾಲ್ಲೂಕಿನ 16 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

137 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 137 ಮಂದಿ ಗುಣಮುಖರಾಗಿ ಗುರುವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 47 ಮಂದಿ, ಮಾಲೂರು ತಾಲ್ಲೂಕಿನ 31, ಬಂಗಾರಪೇಟೆ ತಾಲ್ಲೂಕಿನ 14, ಕೆಜಿಎಫ್‌ ತಾಲ್ಲೂಕಿನ 20, ಮುಳಬಾಗಿಲು ತಾಲ್ಲೂಕಿನ 13 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು