ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರೊಬ್ಬರು ಬುಧವಾರ ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.

ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಕೆಜಿಎಫ್ ತಾಲ್ಲೂಕಿನ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 85 ಮಂದಿ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 759ಕ್ಕೆ ಜಿಗಿದಿದೆ.

ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 44 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 35 ಮಂದಿಗೆ ಸೋಂಕು ಬಂದಿರುವುದು ಗೊತ್ತಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 36 ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರಪೀಡಿತ 20 ಮಂದಿಗೆ, ಸೋಂಕಿತರ ಸಂಪರ್ಕದಿಂದ 10 ಮಂದಿಗೆ, ಒಬ್ಬರು ಆರೋಗ್ಯ ಕಾರ್ಯಕರ್ತರಿಗೆ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ 4 ಮಂದಿಗೆ ಮತ್ತು ಗರ್ಭಿಣಿಯೊಬ್ಬರಿಗೆ ಸೋಂಕು ಬಂದಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 15 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 8 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 8 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ ಒಬ್ಬರಿಗೆ ಸೋಂಕು ಹರಡಿದೆ.

ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕಿನಲ್ಲಿ ತಲಾ 8 ಮಂದಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ಬಂದಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.

72 ಮಂದಿ ಗುಣಮುಖ: ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 72 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ಮನೆಗೆ ಮರಳಿದರು. ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ 27 ಮಂದಿ, ಬಂಗಾರಪೇಟೆ ತಾಲ್ಲೂಕಿನ ಒಬ್ಬರು, ಕೆಜಿಎಫ್ ತಾಲ್ಲೂಕಿನ 13 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.