ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು: ದಾಖಲೆ ಏರಿಕೆ

ಇಬ್ಬರು ಸೋಂಕಿತರ ಸಾವು: 158 ಮಂದಿಗೆ ಸೋಂಕು
Last Updated 5 ಅಕ್ಟೋಬರ್ 2020, 15:36 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಇದರ ಬೆನ್ನಲ್ಲೇ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಕೊರೊನಾ ಸೋಂಕಿತರ ಪೈಕಿ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದು, ಸೋಂಕಿತರ ಸಾವಿನ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. ಸೋಮವಾರ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

158 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,134ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 64 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಮಾಲೂರು ತಾಲ್ಲೂಕಿನ 25, ಬಂಗಾರಪೇಟೆ ತಾಲ್ಲೂಕಿನ 14, ಕೆಜಿಎಫ್‌ ತಾಲ್ಲೂಕಿನ 17, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 19 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ. ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

80 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 80 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 22 ಮಂದಿ, ಮಾಲೂರು ತಾಲ್ಲೂಕಿನ 16, ಬಂಗಾರಪೇಟೆ, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 10 ಮಂದಿ ಹಾಗೂ ಮುಳಬಾಗಿಲು ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT