ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು ಇಳಿಕೆ: ಸಾವು ಏರಿಕೆ

Last Updated 14 ಮೇ 2021, 14:10 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ತಗ್ಗಿದರೂ ಸೋಂಕಿತರ ಸಾವಿನ ರುದ್ರನರ್ತನ ಮುಂದುವರಿದಿದೆ.

ಕಳೆದ 10 ದಿನಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಆದರೆ, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಸೋಂಕಿತರ ಸರಣಿ ಸಾವು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ ಶುಕ್ರವಾರ 8 ಮಂದಿ ಕೊನೆಯುಸಿರೆಳೆದಿದ್ದಾರೆ. ಮುಳಬಾಗಿಲು ತಾಲ್ಲೂಕಿನ 6 ಮಂದಿ ಹಾಗೂ ಮಾಲೂರು ತಾಲ್ಲೂಕಿನ ಇಬ್ಬರು ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 284ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 306 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 5,230ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 131 ಮಂದಿಗೆ, ಮಾಲೂರು ತಾಲ್ಲೂಕಿನ 34, ಬಂಗಾರಪೇಟೆ ತಾಲ್ಲೂಕಿನ 14, ಕೆಜಿಎಫ್‌ ತಾಲ್ಲೂಕಿನ 45 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 67 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 15 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 146 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 99 ಮಂದಿ, ಮಾಲೂರು ತಾಲ್ಲೂಕಿನ 13, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 12, ಮುಳಬಾಗಿಲು ತಾಲ್ಲೂಕಿನ 4 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 15 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT