ಭಾನುವಾರ, ನವೆಂಬರ್ 1, 2020
19 °C

ಶಾಸಕ ನಂಜೇಗೌಡಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಅವರ ಕುಟುಂಬದ 7 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಗುರುವಾರ ರಾತ್ರಿ ದೃಢಪಟ್ಟಿದೆ.

ಶಾಸಕರ ಕಿರಿಯ ಮಗನಿಗೆ ಕೊರೊನಾ ಸೋಂಕಿನ ಲಕ್ಷಣವಿದ್ದ ಕಾರಣಕ್ಕೆ ಮಾಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಸಂಜೆ ಕೋವಿಡ್‌ ಪರೀಕ್ಷೆ ಮಾಡಿಸಿದ್ದರು. ಬಳಿಕ ಅವರಿಗೆ ಸೋಂಕು ಹರಡಿರುವುದು ಖಚಿತವಾಗಿತ್ತು. ಅವರ ಸಂಪರ್ಕಕ್ಕೆ ಬಂದಿದ್ದ ಶಾಸಕರು ಮತ್ತು ಕುಟುಂಬ ಸದಸ್ಯರಿಗೂ ರಾತ್ರಿ ಕೋವಿಡ್‌ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ಗೊತ್ತಾಗಿದೆ.

ಶಾಸಕ ನಂಜೇಗೌಡರು ಬುಧವಾರ ಹಾಗೂ ಗುರುವಾರ ವಿವಿಧೆಡೆ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿದ್ದರು. ಹೀಗಾಗಿ ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅವರ ಸಂಪರ್ಕಕ್ಕೆ ಬಂದಿದ್ದಾರೆ. ಅವರೆಲ್ಲರೂ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.