ಮಂಗಳವಾರ, ಜೂನ್ 22, 2021
22 °C

ಪತ್ನಿಗೆ ಕೊರೊನಾ: ಪತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಪಟ್ಟಣದ ಪ್ರಸಾದ್ ರಸ್ತೆಯ ನಿವಾಸಿ ಶ್ರೀನಿವಾಸ್ (55) ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀನಿವಾಸ್ ಪಟ್ಟಣದಲ್ಲಿ ಉಪ್ಪಿನ ವ್ಯಾಪಾರ ಮಾಡುತ್ತಿದ್ದರು. ಹೆಂಡತಿ ಹಾಗೂ ಮಗಳೊಂದಿಗೆ ಜೀವನ ನಡೆಸುತ್ತಿದ್ದರು. ಅವರ ಪತ್ನಿಗೆ ಜ್ವರ ಕಾಣಿಸಿಕೊಂಡಿತು. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಸಹೋದರ ಶ್ರೀರಾಮಪ್ಪ ನೀಡಿರುವ ದೂರಿನ ಮೇರೆಗೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಸಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.