ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೋವಿಡ್ ಸೋಂಕಿತರ ಸಂಖ್ಯೆ ದಿಢೀರ್‌ ಏರಿಕೆ

ಜಿಲ್ಲೆಯಲ್ಲಿ ಹೊಸದಾಗಿ 90 ಮಂದಿಗೆ ಸೋಂಕು
Last Updated 3 ಸೆಪ್ಟೆಂಬರ್ 2020, 16:50 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್‌ ಏರಿಕೆ ಕಂಡಿದ್ದು, ಹೊಸದಾಗಿ 90 ಮಂದಿಗೆ ಸೋಂಕು ಹರಡಿರುವುದು ಗುರುವಾರ ಖಚಿತವಾಗಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 775ಕ್ಕೆ ಜಿಗಿದಿದೆ.

ಕಳೆದೊಂದು ವಾರದಿಂದ ದಿನಕ್ಕೆ 60ರ ಆಸುಪಾಸಿನಲ್ಲೇ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ, ಗುರುವಾರ ಸೋಂಕಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ.

ವಿಷಮ ಶೀತ ಜ್ವರವಿರುವ 85 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಸೋಂಕು ಬಂದಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 26 ಮಂದಿಗೆ ಸೋಂಕು ಹರಡಿರುವುದು ಗೊತ್ತಾಗಿದೆ. ವಿಷಮ ಶೀತ ಜ್ವರಪೀಡಿತ 24 ಮಂದಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಮತ್ತು ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ತಗುಲಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 11 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 11 ಮಂದಿಗೆ ಮತ್ತು ಗರ್ಭಿಣಿಯೊಬ್ಬರಿಗೆ ಸೋಂಕು ಹರಡಿದೆ.

ಮಾಲೂರು ತಾಲ್ಲೂಕಿನಲ್ಲಿ 23 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ 9 ಹಾಗೂ ಶ್ರೀನಿವಾಸಪುರ ತಾಲ್ಲೂಕಿನಲ್ಲಿ 7 ಮಂದಿಗೆ ಸೋಂಕು ಹರಡಿದೆ. ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

78 ಮಂದಿ ಗುಣಮುಖ: ಸೋಂಕಿತರ ಗುಣಮುಖ ಪ್ರಮಾಣದಲ್ಲಿ ತುಸು ಏರಿಕೆಯಾಗಿದ್ದು, ಆರೋಗ್ಯ ಇಲಾಖೆ ನಿರಾಳವಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 78 ಮಂದಿ ಗುಣಮುಖರಾಗಿ ಗುರುವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 19 ಮಂದಿ, ಮಾಲೂರು ತಾಲ್ಲೂಕಿನ 14, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 29, ಮುಳವಾಗಿಲು ತಾಲ್ಲೂಕಿನ 5 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 8 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT