ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೋಂಕಿತರ ಸಾವಿನ ಸಂಖ್ಯೆ 112ಕ್ಕೆ ಏರಿಕೆ

ಕಳಚದ ಸಾವಿನ ಕೊಂಡಿ: ಸೋಂಕು ಹರಡುವಿಕೆ ದಾಖಲೆ ಹೆಚ್ಚಳ
Last Updated 10 ಅಕ್ಟೋಬರ್ 2020, 14:34 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಶನಿವಾರ 3 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಇದರ ಬೆನ್ನಲ್ಲೇ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ.

ಕಳೆದೊಂದು ವಾರದಿಂದ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಮುಳಬಾಗಿಲು ತಾಲ್ಲೂಕಿನ ಇಬ್ಬರು ಮತ್ತು ಕೆಜಿಎಫ್‌ ತಾಲ್ಲೂಕಿನ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 112ಕ್ಕೆ ಹೆಚ್ಚಳವಾಗಿದೆ.

ಸೋಮವಾರದಿಂದ (ಅ.5) ಈಚೆಗೆ ಆರು ದಿನದಲ್ಲಿ 23 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರ ಸರಣಿ ಸಾವು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ.

ಮತ್ತೊಂದೆಡೆ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರು ಸಂಖ್ಯೆಯಲ್ಲಿ ದಿಢೀರ್‌ ಹೆಚ್ಚಳವಾಗಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಹೊಸದಾಗಿ 197 ಮಂದಿಗೆ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದೆ.

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 73 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನ 62, ಬಂಗಾರಪೇಟೆ ತಾಲ್ಲೂಕಿನ 16, ಕೆಜಿಎಫ್‌ ತಾಲ್ಲೂಕಿನ 10, ಮುಳಬಾಗಿಲು ತಾಲ್ಲೂಕಿನ 17 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 19 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

55 ಮಂದಿ ಗುಣಮುಖ: ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 55 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 26 ಮಂದಿ, ಮಾಲೂರು ತಾಲ್ಲೂಕಿನ 14, ಬಂಗಾರಪೇಟೆ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿ ಹಾಗೂ ಕೆಜಿಎಫ್‌ ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT