ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಸಾವಿನ ಸಂಖ್ಯೆ 165ಕ್ಕೆ ಏರಿಕೆ

Last Updated 11 ನವೆಂಬರ್ 2020, 14:23 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಬುಧವಾರ ಒಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 165ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೆಜಿಎಫ್‌ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 22 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 626ಕ್ಕೆ ಜಿಗಿದಿದೆ.

ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರು, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 5 ಮಂದಿ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿಗೆ ಸೋಂಕು ತಗುಲಿದೆ. ಇವರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 33 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 7 ಮಂದಿ, ಬಂಗಾರಪೇಟೆ ತಾಲ್ಲೂಕಿನ 4, ಕೆಜಿಎಫ್‌ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 9 ಹಾಗೂ ಕೋಲಾರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT