ಬುಧವಾರ, ನವೆಂಬರ್ 25, 2020
21 °C

ಕೊರೊನಾ: ಕೋಲಾರದಲ್ಲಿ 153ಕ್ಕೆ ಏರಿದ ಸಾವಿನ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯಲ್ಲಿ ಬುಧವಾರ ಒಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 153ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಮಾಲೂರು ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 26 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 712ಕ್ಕೆ ಜಿಗಿದಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 8 ಮಂದಿಗೆ ಸೋಂಕು ತಗಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನ 3, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 6 ಮಂದಿಗೆ, ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರಿಗೆ ಸೋಂಕು ಹರಡಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 106 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 20 ಮಂದಿ, ಮಾಲೂರು ತಾಲ್ಲೂಕಿನ 27, ಬಂಗಾರಪೇಟೆ ತಾಲ್ಲೂಕಿನ 8, ಕೆಜಿಎಫ್‌ ತಾಲ್ಲೂಕಿನ 21, ಮುಳಬಾಗಿಲು ತಾಲ್ಲೂಕಿನ 19 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.