ಶುಕ್ರವಾರ, ಜುಲೈ 30, 2021
25 °C

ಶ್ರೀನಿವಾಸಪುರದ ಮಹಿಳೆಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿನ 50 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ಗುರುವಾರ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿದೆ.

ಶ್ರೀನಿವಾಸಪುರದ ಹನುಮನಪಾಳ್ಯ ಬಡಾವಣೆ ನಿವಾಸಿಯಾದ ಈ ಸೋಂಕಿತ ಮಹಿಳೆಯ ಮನೆಗೆ ಇತ್ತೀಚೆಗೆ ಬೆಂಗಳೂರಿನಿಂದ ಸಂಬಂಧಿಕರು ಬಂದು ಹೋಗಿದ್ದರು. ನಂತರ ಮಹಿಳೆಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮಹಿಳೆಯು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಆದರೂ ಗುಣಮುಖರಾಗದ ಕಾರಣ ಅವರನ್ನು ಜಿಲ್ಲಾ ಕೇಂದ್ರದ ಆರ್‌.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಈ ಮಹಿಳೆಯ ಕಫಾ ಮತ್ತು ರಕ್ತ ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಗುರುವಾರ ರಾತ್ರಿ ಬಂದ ಪ್ರಯೋಗಾಲಯ ವರದಿಯಲ್ಲಿ ಮಹಿಳೆಗೆ ಸೋಂಕು ಇರುವುದು ಖಚಿತವಾಗಿದೆ.

ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಹಾಗೂ ಶ್ರೀನಿವಾಸಪುರ ಪುರಸಭೆ ಸಿಬ್ಬಂದಿಯು ಹನುಮನಪಾಳ್ಯ ಬಡಾವಣೆಯನ್ನು ಸೀಲ್‌ಡೌನ್ ಮಾಡಿದರು. ಅಲ್ಲದೇ, ಸೋಂಕಿತ ಮಹಿಳೆಯ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು