ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಮತ್ತೆ 71 ಮಂದಿಗೆ ಕೊರೊನಾ ಸೋಂಕು

Last Updated 15 ಆಗಸ್ಟ್ 2020, 15:41 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 71 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,172ಕ್ಕೆ ಏರಿಕೆಯಾಗಿದೆ.

ವಿಷಮಶೀತ ಜ್ವರದಿಂದ ಬಳಲುತ್ತಿರುವವರನ್ನು ಸೋಂಕು ಬೆಂಬಿಡದೆ ಕಾಡುತ್ತಿದ್ದು, ಆರೋಗ್ಯ ಇಲಾಖೆಯು ಸೋಂಕು ಹರಡುವಿಕೆ ತಡೆಗೆ ತೀವ್ರ ಕಸರತ್ತು ನಡೆಸಿದೆ. ಹೊಸದಾಗಿ ಪತ್ತೆಯಾಗಿರುವ ಸೋಂಕಿತರ ಪೈಕಿ ವಿಷಮ ಶೀತ ಜ್ವರವಿರುವ 49 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 20 ಮಂದಿಗೆ ಸೋಂಕು ತಗುಲಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 26 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರವಿರುವ 23 ಮಂದಿಗೆ, ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಸೋಂಕು ಹರಡಿರುವುದು ಗೊತ್ತಾಗಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ ಇಬ್ಬರಿಗೆ, ಸೋಂಕಿತರ ಸಂಪರ್ಕದಿಂದ 6 ಮಂದಿಗೆ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ತಗುಲಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 3 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಹರಡಿದೆ. ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 8 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಬಂದಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 9 ಮಂದಿಗೆ, ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಶ್ರೀನಿವಾಸಪುರ ತಾಲ್ಲೂಕಿನಲ್ಲಿ 4 ಮಂದಿಗೆ ಸೋಂಕು ಹರಡಿದ್ದು, ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT